ಕೇರಳ :ಬಸ್‌ನಲ್ಲಿ ಲೈಂಗಿಕ ಕಿರುಕುಳ ನೀಡಿದ ವಿಡಿಯೋ ವೈರಲ್ – ಮನನೊಂದು ವ್ಯಕ್ತಿ ಆತ್ಮ*ಹತ್ಯೆ...!!

ಕೇರಳ :ಬಸ್‌ನಲ್ಲಿ ಲೈಂಗಿಕ ಕಿರುಕುಳ ನೀಡಿದ ವಿಡಿಯೋ ವೈರಲ್ – ಮನನೊಂದು ವ್ಯಕ್ತಿ ಆತ್ಮ*ಹತ್ಯೆ...!!

ಕೇರಳ :ಮಹಿಳೆಗೆ ಬಸ್‌ನಲ್ಲಿ ಲೈಂಗಿಕ ಕಿರುಕುಳ ನೀಡಿದ ವಿಡಿಯೋ ವೈರಲ್ ಆದ ನಂತರ ಆರೋಪಿ ದೀಪಕ್ ಯು  ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೇರಳದಲ್ಲಿ ನಡೆದಿದೆ.

ಅಲ್ಲಿನ ಲೋಕನ್ ಬಸ್ಸಿನಲ್ಲಿ ಆತನ ಪ್ರಯಾಣಿಸುತ್ತಿದ್ದಾಗ ಆತ ಲೈಂಗಿಕ ಕಿರುಕುಳ ಕೊಡುವುದನ್ನು ಮಹಿಳೆ ವಿಡಿಯೋ ಮಾಡಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದರು.

ದೀಪಕ್ ಯು ಎಂಬ ಈ ವ್ಯಕ್ತಿ ಕೋಳಿಕ್ಕೋಡ್‌ನ ಗೋವಿಂದಪುರಂ ನಿವಾಸಿ. ಬೆಳಗ್ಗೆ 7 ಗಂಟೆ ಸುಮಾರಿಗೆ ಪೋಷಕರು ಆತನನ್ನು ಎಬ್ಬಿಸಲು ಪ್ರಯತ್ನಿಸಿದಾಗ ಆತ ತನ್ನ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಹಲವು ಬಾರಿ ಬಾಗಿಲು ಬಡಿದು ಕರೆ ಮಾಡಿದರೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಆತಂಕಗೊಂಡ ಪೋಷಕರು ನೆರೆಮನೆಯವರ ನೆರವಿನೊಂದಿಗೆ ಬಾಗಿಲು ತೆರೆದಾಗ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿರುವುದು ತಿಳಿದುಬಂದಿದೆ. ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಹಿನ್ನೆಲೆಯಲ್ಲಿ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆಂದು ಹೇಳಲಾಗುತ್ತಿದೆ.

ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಆ ವ್ಯಕ್ತಿ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದರು ಎಂದು ವರದಿಯಾಗಿದೆ. 20 ಲಕ್ಷಕ್ಕೂ ಹೆಚ್ಚು ಜನರು ಇದನ್ನು ವೀಕ್ಷಿಸಿದ್ದಾರೆ. ಆನ್‌ಲೈನ್ ಪ್ರಚಾರಕ್ಕಾಗಿ ಮಹಿಳೆ ತಮ್ಮ ಮಗನನ್ನೇ ಹತ್ಯೆ ಮಾಡಿದ್ದಾಳೆ ಎಂದು ಅವರು ಆರೋಪಿಸಿದ್ದಾರೆ.

Ads on article

Advertise in articles 1

advertising articles 2

Advertise under the article