ಮಧ್ಯಪ್ರದೇಶ :ಮಗುವಿಗೆ ಜನ್ಮ ನೀಡಿದ 13 ವರ್ಷದ ಬಾಲಕಿ.. ಇಷ್ಟಕ್ಕೆಲ್ಲಾ ಕಾರಣ ಯಾರು?

ಮಧ್ಯಪ್ರದೇಶ :ಮಗುವಿಗೆ ಜನ್ಮ ನೀಡಿದ 13 ವರ್ಷದ ಬಾಲಕಿ.. ಇಷ್ಟಕ್ಕೆಲ್ಲಾ ಕಾರಣ ಯಾರು?

ಮಧ್ಯಪ್ರದೇಶ :ಸರ್ಕಾರಿ ಹಾಸ್ಟೆಲ್‌ನಲ್ಲಿ ವಾಸಿಸುತ್ತಿದ್ದ 13 ವರ್ಷದ ಬಾಲಕಿ ಮಗುವಿಗೆ ಜನ್ಮ ನೀಡಿರುವ ಘಟನೆ ಮಧ್ಯ ಪ್ರದೇಶದ ಬಾಲಘಾಟ್​​ನಲ್ಲಿ ನಡೆದಿದೆ.

ಓದುವ ಸಲುವಾಗಿ ಮನೆಯಲ್ಲಿ ಹಠ ಮಾಡಿ ಹಾಸ್ಟೆಲ್ ಸೇರಿದ್ದ ಆಕೆ 8ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಳು. ತಮ್ಮ ಮಗಳು ಸರ್ಕಾರಿ ಹಾಸ್ಟೆಲ್​ನಲ್ಲಿ ಸುರಕ್ಷಿತಳಾಗಿದ್ದಾಳೆ ಎಂದು ಆಕೆಯ ಪೋಷಕರು ಕೂಡ ನಿರಾಳವಾಗಿದ್ದರು. ಆದರೆ, ಆಕೆ ಗರ್ಭಿಣಿಯಾಗಿದ್ದಾಳೆ ಎಂಬ ವಿಷಯ ತಿಳಿದು ಅವರ ಎದೆ ಒಡೆದುಹೋಗಿತ್ತು.

ಇಷ್ಟು ಚಿಕ್ಕ ವಯಸ್ಸಿನಲ್ಲಿ ಮಗುವನ್ನು ಹೆರಲು ಸಾಧ್ಯವಿಲ್ಲವೆಂದು ಆ ಮಗುವನ್ನು ಅಬಾರ್ಷನ್ ಮಾಡಿಸೋಣ ಎಂದು ಅವರು ನಿರ್ಧಾರ ಮಾಡುವಷ್ಟರಲ್ಲಿ ಸಮಯ ಮೀರಿ ಹೋಗಿತ್ತು. ಇನ್ನೇನು 3-4 ತಿಂಗಳಲ್ಲಿ ಡೆಲಿವರಿಯೇ ಆಗುತ್ತದೆ ಎಂದು ವೈದ್ಯರು ಹೇಳಿದ್ದರು.

ಅಲ್ತಾಫ್ ಎಂಬ ಯುವಕ ಹಾಸ್ಟೆಲ್‌ಗೆ ತರಕಾರಿ ನೀಡಲು ಬರುತ್ತಿದ್ದ.ಸೆಪ್ಟೆಂಬರ್ 2025ರಲ್ಲಿ ಆತ ಆ ವಿದ್ಯಾರ್ಥಿನಿಯ ಕೋಣೆಗೆ ಬಲವಂತವಾಗಿ ನುಗ್ಗಿ ಬಾಗಿಲು ಮುಚ್ಚಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿದ್ದ. ಆಕೆ ವಿರೋಧಿಸಿದಾಗ, ಆಕೆಯನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ.

ಆಕೆ ಈ ಬಗ್ಗೆ ಯಾರ ಬಳಿಯೂ ಹೇಳಿಕೊಂಡಿರಲಿಲ್ಲ. ಆರೋಪಿಯು ಸುಮಾರು 4 ತಿಂಗಳ ಕಾಲ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಮಾಡುತ್ತಲೇ ಇದ್ದ.

ಇತ್ತೀಚೆಗೆ ಆ ಬಾಲಕಿಯ ಆರೋಗ್ಯ ಹದಗೆಟ್ಟಾಗ ಆಕೆಯನ್ನು ಆಸ್ಪತ್ರೆಗೆ ಕರೆತರಲಾಯಿತು. ಅಲ್ಲಿ ತಪಾಸಣೆ ಮಾಡಿದಾಗ ಆಕೆ 5 ತಿಂಗಳ ಗರ್ಭಿಣಿ ಎಂದು ತಿಳಿದುಬಂದಿತ್ತು. ಈ ಘಟನೆಯು ಖುರೈನಲ್ಲಿರುವ ಬುಡಕಟ್ಟು ಸರ್ಕಾರಿ ಹಾಸ್ಟೆಲ್‌ನಲ್ಲಿ ನಡೆದಿದೆ. ವಿದ್ಯಾರ್ಥಿನಿಯನ್ನು ಭೋಪಾಲ್‌ನ ಹಮೀದಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.

 

ಈ ಘಟನೆ ವರದಿಯಾದ ತಕ್ಷಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದರು. ಬುಡಕಟ್ಟು ವ್ಯವಹಾರಗಳ ಇಲಾಖೆಯ ಸಹಾಯಕ ಆಯುಕ್ತರು ಕಸ್ತೂರ್ಬಾ ಗಾಂಧಿ ಬಾಲಿಕಾ ಹಾಸ್ಟೆಲ್‌ನ ಸೂಪರಿಂಟೆಂಡೆಂಟ್ ಚೈನ್‌ಬಾಟಿ ಸೈಯಂ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿದ್ದಾರೆ.  ಬಾಲಕಿಯ ಹೇಳಿಕೆಯ ಆಧಾರದ ಮೇಲೆ, ಯುವಕನನ್ನು ಬಂಧಿಸಿದ್ದಾರೆ.

Ads on article

Advertise in articles 1

advertising articles 2

Advertise under the article