ಮಹಾರಾಷ್ಟ್ರ :7ನೇ ತರಗತಿ ವಿದ್ಯಾರ್ಥಿನಿಗೆ ಹಣ್ಣು, ಮೇಕಪ್ ವಸ್ತು ಕೊಟ್ಟು ಅತ್ಯಾಚಾರ; ಸರ್ಕಾರಿ ಶಾಲೆಯ ಹೆಡ್ ಮಾಸ್ಟ್ರು ಅರೆಸ್ಟ್...!!headmaster sexul harrasment Minor girl
ಇಲ್ಲಿನ ಘಟಂಜಿ ತಾಲೂಕಿನ ಜಿಲ್ಲಾ ಪರಿಷತ್ ಶಾಲೆಯ ಮುಖ್ಯೋಪಾಧ್ಯಾಯನಾದ ಸುಮಾರು 47 ವರ್ಷದ ವ್ಯಕ್ತಿ, ಏಳನೇ ತರಗತಿ ವಿದ್ಯಾರ್ಥಿನಿಯ ಮೇಲೆ ಕಳೆದ ವರ್ಷದ ಮೇ 1 ಮತ್ತು ಫೆಬ್ರವರಿ 5ರಂದು ಅತ್ಯಾಚಾರ ಎಸಗಿದ್ದಾನೆ. ಸಂತ್ರಸ್ತೆಯ ತಂದೆ ಶನಿವಾರ ಈ ಬಗ್ಗೆ ದೂರು ನೀಡಿದ್ದಾರೆ. ಈ ದೂರಿನ ನಂತರ ಆರೋಪಿಯನ್ನು ಭಾನುವಾರ ಬಂಧಿಸಲಾಯಿತು ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಧ್ಯಮಗಳಿಗೆ ತಿಳಿಸಿದರು.
ಪ್ರಾಣ ಬೆದರಿಕೆಯನ್ನೂ ಹಾಕಿದ್ದ ಆರೋಪಿ: ಆರೋಪಿ ಮುಖ್ಯೋಪಾಧ್ಯಾಯ ಬಾಲಕಿಗೆ ಹಣ್ಣು ಮತ್ತು ಮೇಕಪ್ ವಸ್ತುಗಳ ಮೂಲಕ ಆಮಿಷವೊಡ್ಡಿದ್ದ. ಈ ಮೂಲಕ ಎರಡು ಬಾರಿ ಅತ್ಯಾಚಾರ ಮಾಡಿದ್ದಾನೆ. ಇದೇ ವೇಳೆ, ಕೃತ್ಯದ ಕುರಿತು ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬಾಲಕಿಗೆ ಪ್ರಾಣ ಬೆದರಿಕೆ ಹಾಕಿದ್ದ ಎಂದು ಅವರು ಹೇಳಿದರು.
ಭಾರತೀಯ ನ್ಯಾಯ ಸಂಹಿತೆಯ ವಿವಿಧ ಕಲಂಗಳಡಿ ಆರೋಪಿಯ ವಿರುದ್ಧ ಅತ್ಯಾಚಾರ ಮತ್ತು ಕ್ರಿಮಿನಲ್ ಬೆದರಿಕೆ, ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿಯಲ್ಲಿ ಕೇಸು ದಾಖಲಿಸಿಕೊಳ್ಳಲಾಗಿದೆ. ವಿಸ್ತೃತ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ