ಬೆಂಗಳೂರು :ಭೀಕರ ಅಪಘಾತ: ಸ್ಥಳದಲ್ಲೇ 7‌ ಮಂದಿ ಸಾವು..!!

ಬೆಂಗಳೂರು :ಭೀಕರ ಅಪಘಾತ: ಸ್ಥಳದಲ್ಲೇ 7‌ ಮಂದಿ ಸಾವು..!!

ಬೆಂಗಳೂರು: ಹೊಸಕೋಟೆ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಎಂ.ಸತ್ಯವರ ಗ್ರಾಮದ ಬಳಿ ಅಪಘಾತ ಸಂಭವಿಸಿದ್ದು,ಕ್ಯಾಂಟರ್ ವಾಹನ, ಬೈಕ್ ಮತ್ತು ಕಾರಿನ ನಡುವೆ ಡಿಕ್ಕಿಯಾಗಿ 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಹೊಸಕೋಟೆ-ದಾಬಸ್ ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ದುರಂತ ಸಂಭವಿಸಿದ್ದು, ಕ್ಯಾಂಟರ್ ವಾಹನ, ಬೈಕ್ ಮತ್ತು ಕಾರಿನ ನಡುವೆ ಸರಣಿ ಅಪಘಾತವಾಗಿದ್ದು, ಕಾರಿನಲ್ಲಿದ್ದ 6 ಜನ ಹಾಗೂ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

Ads on article

Advertise in articles 1

advertising articles 2

Advertise under the article