ಬೆಂಗಳೂರು :ಸಿಲಿಕಾನ್ ಸಿಟಿಯಲ್ಲಿ ಹೊತ್ತಿ ಉರಿದ ಮತ್ತೊಂದು ಖಾಸಗಿ‌ ಬಸ್..!!!

ಬೆಂಗಳೂರು :ಸಿಲಿಕಾನ್ ಸಿಟಿಯಲ್ಲಿ ಹೊತ್ತಿ ಉರಿದ ಮತ್ತೊಂದು ಖಾಸಗಿ‌ ಬಸ್..!!!

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬುಧವಾರ ಬೆಳಗ್ಗೆ 10:30ರ ವೇಳೆಗೆ ಮತ್ತೊಂದು ಖಾಸಗಿ ಬಸ್ ಹೊತ್ತಿ ಉರಿದಿದೆ.

ಚಂದ್ರಾ ಲೇಔಟ್‌ನ ಬಿಎಂಟಿಸಿ ಡಿಪೋ ಬಳಿ ನಿಲ್ಲಿಸಿದ್ದ ಖಾಸಗಿ ಬಸ್ ಇದ್ದಕ್ಕಿದ್ದಂತೆ ಬೆಂಕಿಗೆ ಆಹುತಿಯಾಗಿದೆ.

ಖಾಸಗಿ ಬಸ್ಸಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ ನಿಮಿಷಗಳಲ್ಲಿ ಬಸ್ ಸಂಪೂರ್ಣವಾಗಿ ಹೊತ್ತಿ ಉರಿದಿದೆ.

ಬೆಂಕಿ ಕಾಣಿಸಿಕೊಂಡ ಸಮಯದಲ್ಲಿ ಬಸ್ಸಿನಲ್ಲಿ ಯಾವುದೇ ಪ್ರಯಾಣಿಕರು ಇರಲಿಲ್ಲ. ಹೀಗಾಗಿ ಸಂಭವಿಸಬಹುದಾಗಿದ್ದ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ.

ಬಸ್ಸಿನಿಂದ ದಟ್ಟ ಹೊಗೆ ಮತ್ತು ಬೆಂಕಿ ಜ್ವಾಲೆ ಹೊರಬರುತ್ತಿದ್ದುದರಿಂದ ಸ್ಥಳೀಯರಲ್ಲಿ ಆತಂಕ ಮನೆ ಮಾಡಿತ್ತು.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದ್ದಾರೆ.

ಚಂದ್ರಾ ಲೇಔಟ್ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಳ್ಳಲು ನಿಖರವಾದ ಕಾರಣ ತಿಳಿದುಬಂದಿಲ್ಲ. ಶಾರ್ಟ್ ಸರ್ಕ್ಯೂಟ್ನಿಂದ ಈ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.

Ads on article

Advertise in articles 1

advertising articles 2

Advertise under the article