ಮಂಗಳೂರು: ಶ್ರೀನಿವಾಸ ಸಮೂಹ ಶಿಕ್ಷಣ ಸಂಸ್ಥೆಗಳ ಸ್ಥಾಪಕ ಸಿಎ ರಾಘವೇಂದ್ರ ರಾವ್ ನಿಧನ ; ಚಾರ್ಟೆಡ್ ಅಕೌಂಟೆಂಟ್ ಆಗಿ ಹತ್ತಾರು ಸಂಸ್ಥೆಗಳನ್ನು ಕಟ್ಟಿದ್ದ ಸಾಧಕ...!

ಮಂಗಳೂರು: ಶ್ರೀನಿವಾಸ ಸಮೂಹ ಶಿಕ್ಷಣ ಸಂಸ್ಥೆಗಳ ಸ್ಥಾಪಕ ಸಿಎ ರಾಘವೇಂದ್ರ ರಾವ್ ನಿಧನ ; ಚಾರ್ಟೆಡ್ ಅಕೌಂಟೆಂಟ್ ಆಗಿ ಹತ್ತಾರು ಸಂಸ್ಥೆಗಳನ್ನು ಕಟ್ಟಿದ್ದ ಸಾಧಕ...!

ಮಂಗಳೂರು, ಫೆ.18: ಶ್ರೀನಿವಾಸ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್‌ ಸ್ಥಾಪಕ ಅಧ್ಯಕ್ಷರು, ಶ್ರೀನಿವಾಸ್ ಯುನಿವರ್ಸಿಟಿಯ ಕುಲಾಧಿಪತಿ ಡಾ. ಸಿಎ ಎ. ರಾಘವೇಂದ್ರ ರಾವ್ (89) ಮಂಗಳವಾರ ರಾತ್ರಿ ನಿಧನ ಹೊಂದಿದರು. 

ಐಸಿಎಐ (ICAI) ದಕ್ಷಿಣ ಭಾರತ ಪ್ರಾದೇಶಿಕ ಮಂಡಳಿಯ ಸದಸ್ಯರಾಗಿ, ಸಿಎ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಮತ್ತು ಎಸ್‌ಐಆರ್‌ಸಿ (SIRC) ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. 1985 ರಿಂದ 1987ರ ಅವಧಿಯಲ್ಲಿ ಕೆನರಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ (CCCI) ಅಧ್ಯಕ್ಷರಾಗಿ ಉದ್ಯಮ ಕ್ಷೇತ್ರಕ್ಕೆ ಮಾರ್ಗದರ್ಶನ ನೀಡಿದ್ದರು.

​ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿ ;

​1988ರಲ್ಲಿ ತಮ್ಮ ತಂದೆಯ ಹೆಸರಿನಲ್ಲಿ ಎ. ಶಾಮರಾವ್ ಫೌಂಡೇಶನ್ ಸ್ಥಾಪಿಸುವ ಮೂಲಕ ಶಿಕ್ಷಣ ಕ್ಷೇತ್ರಕ್ಕೆ ಕಾಲಿಟ್ಟರು. ​ಕೇವಲ 7 ವಿದ್ಯಾರ್ಥಿಗಳೊಂದಿಗೆ ಶ್ರೀನಿವಾಸ್ ಹೋಟೆಲ್ ಮ್ಯಾನೇಜ್‌ಮೆಂಟ್ ಕಾಲೇಜು ಆರಂಭಿಸಿದರು. ​ನಂತರ ಫಿಸಿಯೋಥೆರಪಿ, ಇಂಜಿನಿಯರಿಂಗ್, ಮ್ಯಾನೇಜ್‌ಮೆಂಟ್ ಸೇರಿದಂತೆ 16ಕ್ಕು ಹೆಚ್ಚು ವೃತ್ತಿಪರ ಶಿಕ್ಷಣ ಸಂಸ್ಥೆಗಳನ್ನು ಕಟ್ಟಿ ಬೆಳೆಸಿದ್ದು ಈಗ ಶ್ರೀನಿವಾಸ್ ವಿಶ್ವವಿದ್ಯಾಲಯವಾಗಿ ಹೆಮ್ಮರವಾಗಿ ಬೆಳೆದಿದೆ.

​1980ರಲ್ಲಿ ಮಂಗಳೂರಿನಲ್ಲಿ ಅವರು ಆರಂಭಿಸಿದ 'ಹೋಟೆಲ್ ಶ್ರೀನಿವಾಸ್', ಕರ್ನಾಟಕದ ಮೊದಲ 'ತ್ರೀ ಸ್ಟಾರ್' ಪ್ಯೂರ್ ವೆಜಿಟೇರಿಯನ್ ಹೋಟೆಲ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿತ್ತು.​ಇವರ ಸೇವೆಯನ್ನು ಗುರುತಿಸಿ​2004ರಲ್ಲಿ ಕರ್ನಾಟಕ ರಾಜ್ಯೋತ್ಸವ ಜಿಲ್ಲಾ ಪ್ರಶಸ್ತಿ, 
​ಶಿಕ್ಷಣ ಕ್ಷೇತ್ರದ ಕೊಡುಗೆಗಾಗಿ ಚಿತ್ರಭಾರತಿ ಪ್ರಶಸ್ತಿ, ​SIRC ಡೈಮಂಡ್ ಜುಬಿಲಿ ಪ್ರಶಸ್ತಿ ಸೇರಿದಂತೆ ಹಲವು ಗೌರವಗಳು ಲಭಿಸಿವೆ.

​ಮೃತರು ಪತ್ನಿ ವಿಜಯಲಕ್ಷ್ಮಿ, ಪುತ್ರಿ ಪದ್ಮಿನಿ, ಪುತ್ರ ಶ್ರೀನಿವಾಸ್ ಮತ್ತು ನಾಲ್ವರು ಮೊಮ್ಮಕ್ಕಳನ್ನು ಅಗಲಿದ್ದಾರೆ. ಸಾರ್ವಜನಿಕರ ಅಂತಿಮ ದರ್ಶನಕ್ಕಾಗಿ ಶ್ರೀನಿವಾಸ್ ವಿಶ್ವವಿದ್ಯಾಲಯದ ಮುಕ್ಕ ಕ್ಯಾಂಪಸ್‌ನಲ್ಲಿ ಇಂದು ಬೆಳಗ್ಗೆ 11 ಗಂಟೆಯಿಂದ ವ್ಯವಸ್ಥೆ ಮಾಡಲಾಗಿದೆ

Ads on article

Advertise in articles 1

advertising articles 2

Advertise under the article