ಬೆಂಗಳೂರು: ಇಂಗು ಗುಂಡಿ ಶುಚಿಗೊಳಿಸುವಾಗ ಮೂರ್ಛೆ ತಪ್ಪಿ ಮೂವರು ಸಾವು....!!!

ಬೆಂಗಳೂರು: ಇಂಗು ಗುಂಡಿ ಶುಚಿಗೊಳಿಸುವಾಗ ಮೂರ್ಛೆ ತಪ್ಪಿ ಮೂವರು ಸಾವು....!!!

BENGALURU  ಇಂಗು ಗುಂಡಿ  DEATH  FAINTED

ಬೆಂಗಳೂರು: ಮಳೆ ನೀರಿನ ಇಂಗು ಗುಂಡಿ ಶುಚಿಗೊಳಿಸುವಾಗ ಮೂವರು ಸಾವನ್ನಪ್ಪಿರುವ ಘಟನೆ ನಿನ್ನೆ (ಶನಿವಾರ) ವೈಟ್‌ಫೀಲ್ಡ್ ಠಾಣಾ ವ್ಯಾಪ್ತಿಯ ಇಮ್ಮಡಿಹಳ್ಳಿ ದೇಗುಲದ ವೃತ್ತದ ಬಳಿ ನಡೆದಿದೆ.

ಮುನಿಶಾಮಪ್ಪ (67), ರುದ್ರಕುಮಾರ್ (40) ಮತ್ತು ವಿಶ್ವನಾಥ್ ಆಚಾರಿ (24) ಮೃತರು. ವೈಟ್‌ಫೀಲ್ಡ್​ ಪೊಲೀಸ್‌ ಠಾಣೆಯಲ್ಲಿ ಘಟನೆಯ ಕುರಿತು ಪ್ರಕರಣ ದಾಖಲಾಗಿದೆ.

ಮನೆ ಮಾಲೀಕ ಮುನಿಶಾಮಪ್ಪ 12 ವರ್ಷಗಳ ಹಿಂದೆ ನಿರ್ಮಿಸಿದ್ದ ಇಂಗು ಗುಂಡಿಯನ್ನು ಬಳಸುತ್ತಿರಲಿಲ್ಲ. ಹೀಗಾಗಿ ಗುಂಡಿಯಲ್ಲಿ ತುಂಬಿಕೊಂಡಿದ್ದ, ನೀರಿನಲ್ಲಿ ಬಿದ್ದ ವಸ್ತುಗಳು ಕೊಳೆತು ದುರ್ವಾಸನೆ ಬರಲಾರಂಭಿಸಿತ್ತು. ರಾಸಾಯನಿಕ ಸಿಂಪಡಿಸಿ‌ ಶುಚಿಗೊಳಿಸಲು ಮುಂದಾಗಿದ್ದರು. ಈ ವೇಳೆ ಉಸಿರಾಟದ ತೊಂದರೆಯಾಗಿ ಮುನಿಶಾಮಪ್ಪ ಮೂರ್ಛೆ ಹೋಗಿದ್ದಾರೆ.

ಮಾಲೀಕನನ್ನು ರಕ್ಷಿಸಲು ಹೋದ ಪ್ಲಂಬರ್ ರುದ್ರಕುಮಾರ್​​ ಸಹ ಮೂರ್ಛೆ ಹೋಗಿದ್ದಾರೆ. ಇವರಿಬ್ಬರನ್ನು ನೋಡಲು ಹೋದ ವಿಶ್ವನಾಥ್ ಆಚಾರಿ ಎಂಬ ಯುವಕ ಕೂಡ ಮೂರ್ಛೆ ಹೋಗಿದ್ದಾನೆ. ವಿಶ್ವನಾಥ್ ಡೆಲಿವರಿ ಬಾಯ್​ ಆಗಿ ಕೆಲಸ ಮಾಡುತ್ತಿದ್ದ. ಮೂವರನ್ನೂ ಅಕ್ಕಪಕ್ಕದ ಮನೆಯವರು ಖಾಸಗಿ ಆಸ್ಪತ್ರೆಗೆ ಸಾಗಿಸಲು ಯತ್ನಿಸಿದ್ದರಾದರೂ ಮಾರ್ಗಮಧ್ಯೆ ಮೂವರೂ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Ads on article

Advertise in articles 1

advertising articles 2

Advertise under the article