ಬೆಂಗಳೂರು :ನಿಜವಾದ ಪ್ರೇಮಿಯು ಇಂತಹ ಕೆಲಸ ಮಾಡಲ್ಲ..! ಪ್ರೇಯಸಿ ಜತೆಗಿನ ಖಾಸಗಿ ಕ್ಷಣ ಸೆರೆಹಿಡಿದವನಿಗೆ ಜಾಮೀನು ನಿರಾಕರಿಸಿದ ಹೈಕೋರ್ಟ್..!

ಬೆಂಗಳೂರು : ಪ್ರೀತಿಯ ವಿಚಾರಕ್ಕೆ ಸಂಬಂಧಪಟ್ಟಂತೆ ಹೈಕೋರ್ಟ್ ಪ್ರೇಯಸಿಯ ಜೊತೆಗಿನ ಖಾಸಗಿ ಕ್ಷಣಗಳನ್ನು ಸೆರೆಹಿಡಿದ ಯುವಕನಿಗೆ ಹೈಕೋರ್ಟ್ ಜಾಮೀನು ನಿರಾಕರಿಸಿದೆ.
ವಿಚಾರಣೆ ವೇಳೆ ನಿಜವಾದ ಪ್ರೇಮಿಯು ತನ್ನ ಪ್ರೇಯಸಿಯೊಂದಿಗೆ ಕಳೆದ ಖಾಸಗಿ ಕ್ಷಣಗಳ ದೃಶ್ಯಗಳನ್ನು ಸೆರೆಹಿಡಿಯುವುದಿಲ್ಲ. ಅಲ್ಲದೆ, ಅಂತಹ ಪೋಟೋಗಳನ್ನು ತೋರಿಸಿ ಲೈಂಗಿಕ ಕ್ರಿಯೆಗೆ ಬಲವಂತಪಡಿಸುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ಪ್ರಕರಣದಲ್ಲಿ ಅರ್ಜಿದಾರ ಆರೋಪಿಯು, ಬ್ಲ್ಯಾಕ್‌ಮೇಲ್ ಮಾಡಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆಂದು ಆರೋಪಿಸಿ ಸಂತ್ರಸ್ತೆಯು 2025ರ ಮಾ.11ರಂದು ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣ ಸಂಬಂಧ ನಿರೀಕ್ಷಣಾ ಜಾಮೀನು ಕೋರಿ ಆರೋಪಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣಾ ನ್ಯಾಯಾಲಯ ತಿರಸ್ಕರಿಸಿತ್ತು. ಹಾಗಾಗಿ, ಆರೋಪಿ ಹೈಕೋರ್ಟ್ ಮೊರೆ ಹೋಗಿದ್ದ. ಪ್ರಕರಣದಲ್ಲಿ ಪೊಲೀಸರು ತನಿಖೆ ನಡೆಸಿ, ಆರೋಪಿ ವಿರುದ್ಧ ಆರೋಪಪಟ್ಟಿ ಸಲ್ಲಿಸಿದ್ದಾರೆ.
ಆರೋಪಿಯು ತಲೆಮರೆಸಿಕೊಂಡಿದ್ದಾನೆ. ಆರೋಪಿ ತಾನು ಕಾನೂನು ಪಾಲಕನಾಗಿದ್ದು, ನಿರೀಕ್ಷಣಾ ಜಾಮೀನು ನೀಡಬೇಕೆಂದು ಕೋರಿದ್ದಾನೆ. ಆದರೆ, ತಲೆಮರೆಸಿಕೊಂಡಿರುವ ಆರೋಪಿ ಕಾನೂನು ಪಾಲಕನೆಂದು ಹೇಳಿದರೆ ಅದನ್ನು ಪರಿಗಣಿಸಲಾಗದು. ಪೊಲೀಸರು ಸಂಗ್ರಹಿಸಿರುವ ಮಾಹಿತಿ ಪರಿಶೀಲಿಸಿದರೆ ಆರೋಪಿಯ ನೀರೀಕ್ಷಣಾ ಜಾಮೀನು ಅರ್ಜಿ ಪುರಸ್ಕರಿಸುವ ಅಗತ್ಯತೆ ಇಲ್ಲ, ಎಂದು ನ್ಯಾಯಪೀಠ