ಬೆಂಗಳೂರು: ಏರ್ಪೋರ್ಟ್ ನಲ್ಲಿ ಕೋಟ್ಯಂತರ ಮೌಲ್ಯದ ಚಿನ್ನಾಭರಣ ಕಳವು ; ಅಮೆರಿಕ ತೆರಳುತ್ತಿದ್ದ ಮಹಿಳೆಯ ಬ್ಯಾಗ್ ನಲ್ಲಿದ್ದ ಒಡವೆ ಕಾಣೆ..!!

ಬೆಂಗಳೂರು: ಏರ್ಪೋರ್ಟ್ ನಲ್ಲಿ ಕೋಟ್ಯಂತರ ಮೌಲ್ಯದ ಚಿನ್ನಾಭರಣ ಕಳವು ; ಅಮೆರಿಕ ತೆರಳುತ್ತಿದ್ದ ಮಹಿಳೆಯ ಬ್ಯಾಗ್ ನಲ್ಲಿದ್ದ ಒಡವೆ ಕಾಣೆ..!!

ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಅಮೆರಿಕಾಗೆ ತೆರಳುತ್ತಿದ್ದ ಮಹಿಳೆಯ ಲಗೇಜ್ ಬ್ಯಾಗ್ ನಲ್ಲಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನ, ವಜ್ರಾಭರಣ ಕಳವಾಗಿದ್ದು ಕೆಂಪೇಗೌಡ ಏರ್ಪೋರ್ಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಹುಬ್ಬಳ್ಳಿ ಮೂಲದ ಶಾಂತಾ ರಮೇಶ್ ಕಾಶಿ ಕೌಂಟಿ ಎಂಬವರು ಕುಟುಂಬ ಸಮೇತ ಅಮೆರಿಕದಲ್ಲಿ ನೆಲೆಸಿದ್ದು ಕಳೆದ ಆಗಸ್ಟ್ ನಲ್ಲಿ ಹುಬ್ಬಳ್ಳಿಗೆ ಆಗಮಿಸಿದ್ದರು. ಮರಳಿ ನವೆಂಬರ್ ನಲ್ಲಿ ವಾಪಸ್ ಅಮೆರಿಕಗೆ ತೆರಳಿದ್ದು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದುಬೈನ ಅಬುಧಾಬಿಗೆ ಪ್ರಯಾಣ ಬೆಳೆಸಿದ್ದಾರೆ.

ಈ ವೇಳೆ, ಲಗೇಜ್ ಬ್ಯಾಗ್ ನಲ್ಲಿ ಇರಿಸಿದ್ದ ಸುಮಾರು 790 ಗ್ರಾಂ ಚಿನ್ನಾಭರಣ ಹಾಗೂ 8 ಲಕ್ಷ ಮೌಲ್ಯದ ವಜ್ರಾವರಣ ಕಳವಾಗಿದೆ. ಬೆಂಗಳೂರಿನಿಂದ ಪ್ರಯಾಣ ಬೆಳೆಸಿದ ಮಹಿಳೆ ಅಬುದಾಬಿಯಲ್ಲಿ ಲಗೇಜ್ ಬ್ಯಾಗ್ ಪಡೆದು ಚೆಕ್ ಮಾಡಿದಾಗ ಬ್ಯಾಗಿನಲ್ಲಿದ್ದ ಒಡವೆಗಳು ಇರಲಿಲ್ಲ. ಹೀಗಾಗಿ ಮತ್ತೆ ವಾಪಸ್ ಬಂದಿರುವ ಮಹಿಳೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪೊಲೀಸ್ ಠಾಣೆಯಲ್ಲಿ ಚಿನ್ನಾಭರಣ ಕಳವಾಗಿರುವ ಬಗ್ಗೆ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Ads on article

Advertise in articles 1

advertising articles 2

Advertise under the article