ಅಮರಾವತಿ :ಬಸ್ ಹೊತ್ತಿ ಉರಿದು 10 ಪ್ರಯಾಣಿಕರು ಸಜೀವ ದಹನ !!!.

ಅಮರಾವತಿ: ಖಾಸಗಿ ಬಸ್ ಮತ್ತು ಟಿಪ್ಪರ್ ಲಾರಿ ಮುಖಾಮುಖಿ ಡಿಕ್ಕಿಯಿಂದಾಗಿ ಬಸ್‌ನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, 10 ಜನ ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯ ಮಾರ್ಕಾಪುರಂ ಸಮೀಪ ನಡೆದಿದೆ
ಖಾಸಗಿ ಬಸ್ ಹೈದರಾಬಾದ್‌ನಿಂದ ಕಾಕಿನಾಡ ಕಡೆಗೆ ತೆರಳುತ್ತಿದ್ದಾಗ ಎದುರುಗಡೆಯಿಂದ ವೇಗವಾಗಿ ಬಂದ ಟಿಪ್ಪರ್ ಲಾರಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಸ್‌ನ ಡೀಸೆಲ್ ಟ್ಯಾಂಕ್ ಸ್ಫೋಟಗೊಂಡು ಕ್ಷಣಾರ್ಧದಲ್ಲಿ ಇಡೀ ಬಸ್ ಬೆಂಕಿಯ ಕೆನ್ನಾಲಿಗೆಗೆ ತುತ್ತಾಗಿದೆ. ಬಸ್‌ನಲ್ಲಿದ್ದ ಪ್ರಯಾಣಿಕರು ನಿದ್ರೆಯಲ್ಲಿದ್ದ ಕಾರಣ, ಹೊರಬರಲು ಸಾಧ್ಯವಾಗದೆ ಬೆಂಕಿಯಲ್ಲಿ ಸಿಲುಕಿಕೊಂಡಿದ್ದಾರೆ.
ಗಾಯಾಳುಗಳ ಪೈಕಿ ಕೆಲವರ ಸ್ಥಿತಿ ಚಿಂತಾಜನಕವಾಗಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ
ಘಟನೆ ಸಂಭವಿಸಿದ ತಕ್ಷಣ ಸ್ಥಳೀಯರು ಮತ್ತು ಪೊಲೀಸರು ರಕ್ಷಣಾ ಕಾರ್ಯದಲ್ಲಿ ತೊಡಗಿಸಿಕೊಂಡರು. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿದ್ದಾರೆ. ಅತಿಯಾದ ವೇಗ ಮತ್ತು ಚಾಲಕನ ಅಜಾಗರೂಕತೆಯೇ ಈ ಭೀಕರ ಅಪಘಾತಕ್ಕೆ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.