ಮಧ್ಯ ಪ್ರದೇಶ : ಭಾರಿ ಅಗ್ನಿ ದುರಂತ: ಆರು ಜನರ ಸಜೀವ ದಹನ; ಮೂವರ ಸ್ಥಿತಿ ಗಂಭೀರ; ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚುವ ಸಾಧ್ಯತೆ...!!

ಮಧ್ಯ ಪ್ರದೇಶ : ಭಾರಿ ಅಗ್ನಿ ದುರಂತ: ಆರು ಜನರ ಸಜೀವ ದಹನ; ಮೂವರ ಸ್ಥಿತಿ ಗಂಭೀರ; ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚುವ ಸಾಧ್ಯತೆ...!!


6 Died in Fire accident in Indoreಮಧ್ಯಪ್ರದೇಶ: ಇಂದೋರ್‌ನಲ್ಲಿ ಭಾರಿ ಬೆಂಕಿ ಹೊತ್ತಿಕೊಂಡಿರುವ ಘಟನೆ ವರದಿಯಾಗಿದೆ. ಮಂಗಳವಾರ ತಡರಾತ್ರಿ ಬ್ರಿಜೇಶ್ವರಿ ಅನೆಕ್ಸ್ ವಸತಿ ಪ್ರದೇಶದ ಮನೆಯೊಂದರಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಆರು ಜನರು ಜೀವಂತವಾಗಿ ಸುಟ್ಟು ಕರಕಲಾಗಿದ್ದಾರೆ.

ಈ ಘಟನೆಯಲ್ಲಿ ಮೂವರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಈ ಘಟನೆ ಬಗ್ಗೆ ಮಾಹಿತಿ ತಿಳಿದ ಬಳಿಕ ತಕ್ಷಣವೇ ಅಗ್ನಿ ಶಾಮಕ ದಳಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕೆಲಸ ಮಾಡುತ್ತಿವೆ. ಅಗ್ನಿ ಆಕಸ್ಮಿಕಕ್ಕೆ ಕಾರಣ ಏನೆಂದು ತಕ್ಷಣಕ್ಕೆ ತಿಳಿದುಬಂದಿಲ್ಲ. ಈ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಡಿಸಿ: ಸುದ್ದಿ ತಿಳಿದು ಅಲ್ಲಿನ ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಧಾವಿಸಿ ಬಂದಿದ್ದಾರೆ. ಘಟನೆಯ ಪರಿಶೀಲನೆ ನಡೆಸಿದ್ದಾರೆ. ಕಲೆಕ್ಟರ್ ಜತೆ ಇತರ ಆಡಳಿತ ಮತ್ತು ಪೊಲೀಸ್ ಅಧಿಕಾರಿಗಳು ಸ್ಥಳದಲ್ಲಿದ್ದಾರೆ. ಘಟನೆ ಬಗ್ಗೆ ಮಾತನಾಡಿರುವ ಜಿಲ್ಲಾಧಿಕಾರಿ ಶಿವಂ ವರ್ಮಾ, ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿದ್ದು, ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ. ಈ ದುರಂತದಲ್ಲಿ ಆರು ಜನರು ಸಾವನ್ನಪ್ಪಿದ್ದಾರೆ. ಎರಡು ಮಹಡಿಗಳನ್ನು ಸ್ಥಳಾಂತರಿಸಲಾಗಿದೆ. ಆದರೆ ನಮ್ಮ ತಂಡವು ಮತ್ತೊಂದು ಮಹಡಿಯನ್ನು ಕೂಡಾ ಪರಿಶೀಲಿಸುತ್ತಿದೆ ಎಂದು ತಿಳಿಸಿದ್ದಾರೆ.

ಕಾರು ಚಾರ್ಜಿಂಗ್ ಸ್ಟೇಷನ್‌ನಲ್ಲಿ ಶಾರ್ಟ್ ಸರ್ಕ್ಯೂಟ್ ಶಂಕೆ: ಕಾರು ಚಾರ್ಜಿಂಗ್ ಸ್ಟೇಷನ್‌ನಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಗ್ಯಾಸ್ ಟ್ಯಾಂಕ್‌ನಲ್ಲಿ ಸ್ಫೋಟ ಸಂಭವಿಸಿದೆ ಎಂದು ಶಂಕಿಸಲಾಗಿದೆ.

ಪೊಲೀಸರು ನೀಡಿರುವ ಮಾಹಿತಿ ಪ್ರಕಾರ: ಬೆಳಗಿನ ಜಾವ 3:00 ಗಂಟೆ ಸುಮಾರಿಗೆ ಬ್ರಿಜೇಶ್ವರಿ NX ನಲ್ಲಿ ವಾಸಿಸುವ ಪುಗಾಲಿಯಾ ಕುಟುಂಬವು ಸಮಾರಂಭದಲ್ಲಿ ತೊಡಗಿತ್ತು ಎಂದು ತಿಳಿದುಬಂದಿದೆ. ಮನೆಯ ಕೆಳಗೆ ನಿಲ್ಲಿಸಿದ್ದ ಎಲೆಕ್ಟ್ರಿಕ್ ಕಾರು ಚಾರ್ಜ್ ಮಾಡುವಾಗ ಶಾರ್ಟ್ ಸರ್ಕ್ಯೂಟ್ ಆಗಿದ್ದು, ಕಾರಿಗೆ ಬೆಂಕಿ ಹೊತ್ತಿಕೊಂಡಿರಬಹುದು. ಇದು ನಂತರ ಕಟ್ಟಡಕ್ಕೆ ಹರಡಿರಬಹುದು. ಇದೇ ವೇಳೆ ಮನೆಯಲ್ಲಿ ಸಂಗ್ರಹಿಸಲಾದ LPG ಸಿಲಿಂಡರ್‌ಗಳು ಸ್ಫೋಟಗೊಂಡಿದ್ದು, ಯಾರೂ ತಪ್ಪಿಸಿಕೊಳ್ಳಲು ಸಾಧ್ಯವಾಗಲಿಲ್ಲ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹಲವಾರು ವಾಹನಗಳು ಸುಟ್ಟು ಭಸ್ಮವಾಗಿವೆ, ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗಬಹುದು ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ನಂತರ ಅನೇಕ ಭಯಾನಕ ಚಿತ್ರಗಳು ಹೊರಹೊಮ್ಮಿವೆ. ಬೆಂಕಿ ಎಷ್ಟು ತೀವ್ರವಾಗಿತ್ತು ಎಂದರೆ ಕಾರುಗಳು ಮತ್ತು ಬೈಕ್‌ಗಳು ಸೇರಿದಂತೆ ಇಡೀ ಕಟ್ಟಡವು ದಗ ದಗ ಹೊತ್ತಿ ಉರಿದಿದೆ.

ನೆರೆಹೊರೆಯವರ ಪ್ರಕಾರ ಭಾರಿ ಸ್ಫೋಟದ ಶಬ್ದ ಕೇಳಿಬಂದಿತು. ಆ ಬಳಿಕ ಕಿರುಚಾಟಗಳು ಕೇಳಿಬಂದವು ಎಂದು ತಿಳಿದು ಬಂದಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಪ್ರತಿಯೊಂದು ಅಂಶವನ್ನು ತನಿಖೆ ಮಾಡುತ್ತಿದ್ದಾರೆ ಎಂದು ವರದಿಯಾಗಿದೆ.

Ads on article

Advertise in articles 1

advertising articles 2

Advertise under the article