ಮಧ್ಯಪ್ರದೇಶ :ಭೀಕರ ಅಪಘಾತ ಇಬ್ಬರು ಮಕ್ಕಳು ಸೇರಿ 14 ಜನರು ಸಾವು, 10ಕ್ಕೂ ಅಧಿಕ ಜನರಿಗೆ ಗಾಯ...

ಮಧ್ಯಪ್ರದೇಶ :ಭೀಕರ ಅಪಘಾತ ಇಬ್ಬರು ಮಕ್ಕಳು ಸೇರಿ 14 ಜನರು ಸಾವು, 10ಕ್ಕೂ ಅಧಿಕ ಜನರಿಗೆ ಗಾಯ...

several-killed-in-road-accident-after-pickup-overturns-many-serious

 ಮಧ್ಯ ಪ್ರದೇಶ: ಕಾರ್ಮಿಕರು ತೆರಳುತ್ತಿದ್ದ ಪಿಕಪ್ ವಾಹನವೊಂದು ಪಲ್ಟಿಯಾದ ಪರಿಣಾಮ 14 ಜನರು ಸಾವನ್ನಪ್ಪಿದ ಘಟನೆ ಮಧ್ಯಪ್ರದೇಶದ ಧಾರ್ ಜಿಲ್ಲೆಯ ತಿರ್ಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬುಧವಾರ ರಾತ್ರಿ ಸಂಭವಿಸಿದೆ. ಮೃತರಲ್ಲಿ ಇಬ್ಬರು ಮಕ್ಕಳೂ ಸೇರಿದ್ದು, 10ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ.

ಪೊಲೀಸರ ಮಾಹಿತಿಯ ಪ್ರಕಾರ, ಪಿಕಪ್ ವಾಹನದಲ್ಲಿ ಸುಮಾರು 30ರಿಂದ 35 ಕಾರ್ಮಿಕರು ಹಾಗೂ ಅವರ ಮಕ್ಕಳು ಅಮ್ಜೆರಾ ಕಡೆಗೆ ಪ್ರಯಾಣಿಸುತ್ತಿದ್ದರು. ರಾತ್ರಿ 8:30ರ ವೇಳೆಗೆ ಈ ಅಪಘಾತ ಸಂಭವಿಸಿದೆ. ಪಿಕಪ್ ವಾಹನ ಇದ್ದಕ್ಕಿದ್ದಂತೆ ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿ, ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದ್ದು, ಎಲ್ಲಾ ಕಾರ್ಮಿಕರು ವಾಹನದ ಕೆಳಭಾಗದಲ್ಲಿ ಸಿಲುಕಿಕೊಂಡರು.

ಅಪಘಾತ ಸ್ಥಳದಲ್ಲಿ ಕಿರುಚಾಟ, ಆಕ್ರಂದನ: ಅಪಘಾತದಿಂದ ಸ್ಥಳದಲ್ಲಿ ಗಾಯಾಳುಗಳು ಕಿರುಚಾಡುತ್ತ ಸಹಾಯಕ್ಕಾಗಿ ಅಂಗಲಾಚುತ್ತಿದ್ದರು. ದಾರಿಹೋಕರು ಮತ್ತು ಸ್ಥಳೀಯ ನಿವಾಸಿಗಳು ಸ್ಥಳಕ್ಕೆ ಧಾವಿಸಿ, ತಕ್ಷಣ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ವಾಹನದ ಕೆಳಗೆ ಸಿಲುಕಿದ್ದ ಜನರನ್ನು ಹೊರತೆಗೆದಿದ್ದಾರೆ. ಅನೇಕ ಕಾರ್ಮಿಕರು ಗಾಯಗೊಂಡು ರಸ್ತೆಯುದ್ದಕ್ಕೂ ಚದುರಿ ಬಿದ್ದಿದ್ದರು.

ಪ್ರತ್ಯಕ್ಷದರ್ಶಿಗಳ ಪ್ರಕಾರ, ಹಲವರು ಸ್ಥಳದಲ್ಲೇ ಸಾವನ್ನಪ್ಪಿದರು, ಅವರ ಶವಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿರುವುದು ಕಂಡುಬಂತು. ಗಾಯಾಳುಗಳನ್ನು ಧಾರ್ ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಯಿತು. ಆಸ್ಪತ್ರೆಗೆ ತರಲಾದ ಹಲವಾರು ಗಾಯಾಳುಗಳ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.

ಆಸ್ಪತ್ರೆಯಲ್ಲಿ ವೈದ್ಯರ ತಂಡವು ನಿರಂತರವಾಗಿ ವೈದ್ಯಕೀಯ ಚಿಕಿತ್ಸೆ ನೀಡುವಲ್ಲಿ ತೊಡಗಿಸಿಕೊಂಡಿದೆ. ಜಿಲ್ಲಾ ಆಸ್ಪತ್ರೆಯ ತುರ್ತು ವೈದ್ಯಕೀಯ ಅಧಿಕಾರಿ ಡಾ.ಸತ್ಯಪಾಲ್, ಎಲ್ಲಾ ಗಾಯಾಳುಗಳು ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಅಧಿಕಾರಿಗಳು ಮತ್ತು ಪೊಲೀಸ್ ತಂಡಗಳ ಭೇಟಿ: ಘಟನೆಯ ಬಗ್ಗೆ ಮಾಹಿತಿ ಸಿಕ್ಕ ಬೆನ್ನಲ್ಲೇ, ತಿರ್ಲಾ ಪೊಲೀಸರು ಮತ್ತು ಅಧಿಕಾರಿಗಳು ಅಪಘಾತ ಸ್ಥಳಕ್ಕೆ ಧಾವಿಸಿದರು. ರಕ್ಷಣಾ ಕಾರ್ಯಾಚರಣೆ ನಡೆದಿದ್ದು, ಅಪಘಾತದ ಕಾರಣಗಳ ಬಗ್ಗೆ ತನಿಖೆ ಆರಂಭಿಸಲಾಗಿದೆ. ಕೆಲವರು ಗಂಭೀರ ಗಾಯಗೊಂಡಿರುವ ಹಿನ್ನೆಲೆಯಲ್ಲಿ, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Ads on article

Advertise in articles 1

advertising articles 2

Advertise under the article