ಮುಂಬೈ :ಮತ್ತೊಂದು ಲವ್ ಜಿಹಾದ್ ಪ್ರಕರಣ ;ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ, 350ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ಪತ್ತೆ!
Wednesday, April 15, 2026

ಮುಂಬೈ: ಮಹಾರಾಷ್ಟ್ರದಲ್ಲಿ ಇನ್ನೊಂದು ದೊಡ್ಡ ಲವ್ ಜಿಹಾದ್ ಪ್ರಕರಣ ಬಳಕಿಗೆ ಬಂದಿದೆ. 180 ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ 350ಕ್ಕೂ ಹೆಚ್ಚು ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿರುವ ಆರೋಪಿಯನ್ನು ಬಂಧಿಸಲಾಗಿದೆ. ಬಿಜೆಪಿ ಸಂಸದರೊಬ್ಬರ ದೂರಿನ ಮೇರೆ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ.
ಅಮರಾವತಿಯ ಪರತ್ವಾಡ ನಗರದ ನಿವಾಸಿ ಮೊಹಮ್ಮದ ಅಯಾಜ್ ಅಲಿಯಾಸ್ ತನ್ನೀರ್ ಹುಡುಗಿಯರನ್ನು ಪ್ರೀತಿಯ ಬಲೆಗೆ ಬೀಳಿಸಿ ಮುಂಬೈ ಮತ್ತು ಪುಣೆಗೆ ಕರೆದೊಯ್ದು ಅವರ ಅಶ್ಲೀಲ ವೀಡಿಯೊಗಳನ್ನು ಚಿತ್ರೀಕರಿಸಿದ್ದಾನೆ ಎಂದು ಆರೋಪಿಸಲಾಗಿದೆ. ಹುಡುಗಿಯರನ್ನು ಬ್ಲ್ಯಾಕ್‌ಮೇಲ್ ಮಾಡಲು ಮತ್ತು ವೇಶ್ಯಾವಾಟಿಕೆಗೆ ಒತ್ತಾಯಿಸಲು ಈ ವಿಡಿಯೋಗಳನ್ನು
ಬಳಸಲಾಗುತ್ತಿತ್ತು ಎಂದು ಆರೋಪಿಸಲಾಗಿದೆ. ಕೆಲವು ವಿಡಿಯೋಗಳನ್ನು ಆನ್‌ಲೈನ್‌ನಲ್ಲಿಯೂ ವ್ಯಾಪಕವಾಗಿ ಹಂಚಿಕೊಳ್ಳಲಾಗಿದೆ.