ಬೆಂಗಳೂರು :ರಾಜ್ಯದಲ್ಲಿ ಇನ್ಮುಂದೆ ದ್ವಿತೀಯ PUCವರೆಗೆ ಗಂಡು ಮಕ್ಕಳಿಗೂ ಉಚಿತ ಬಸ್ ಪ್ರಯಾಣದ ವ್ಯವಸ್ಥೆ..!!

ಬೆಂಗಳೂರು :ರಾಜ್ಯದಲ್ಲಿ ಇನ್ಮುಂದೆ ದ್ವಿತೀಯ PUCವರೆಗೆ ಗಂಡು ಮಕ್ಕಳಿಗೂ ಉಚಿತ ಬಸ್ ಪ್ರಯಾಣದ ವ್ಯವಸ್ಥೆ..!!

BENGALURU  KARNATAKA FRESS BUS FOR STUDENTS  ವಿದ್ಯಾರ್ಥಿ ಸ್ನೇಹಿ ಸಾರಿಗೆ ವ್ಯವಸ್ಥೆ  ವಿದ್ಯಾರ್ಥಿಗಳಿಗೆ ಉಚಿತ ಬಸ್​

ಬೆಂಗಳೂರು: ರಾಜ್ಯಾದ್ಯಂತ ಶಾಲಾ ಮಕ್ಕಳ ಸುರಕ್ಷಿತ ಮತ್ತು ಸುಗಮ ಪ್ರಯಾಣವನ್ನು ಖಾತ್ರಿಪಡಿಸುವ ಉದ್ದೇಶದಿಂದ ವಿದ್ಯಾರ್ಥಿಸ್ನೇಹಿ ಸಾರಿಗೆ ವ್ಯವಸ್ಥೆಯನ್ನು ಪರಿಚಯಿಸಲು ಕರ್ನಾಟಕ ಸರ್ಕಾರ ಸಿದ್ಧತೆ ನಡೆಸುತ್ತಿದೆ. ಈ ನಿಟ್ಟಿನಲ್ಲಿ 12ನೇ ತರಗತಿವರೆಗೆ ಗಂಡು ಮಕ್ಕಳಿಗೂ ಕೆಎಸ್​ಆರ್​ಟಿಸಿ ಬಸ್​ಗಳಲ್ಲಿ ಉಚಿತ ಪ್ರಯಾಣದ ಪ್ರಯೋಜನಗಳನ್ನು ವಿಸ್ತರಿಸಲು ಸರ್ಕಾರ ಯೋಜನೆ ರೂಪಿಸಿದೆ.

ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಮಾಡಿರುವ ಶಿಫಾರಸುಗಳನ್ನು ಅನುಸರಿಸಿ ಕ್ರಮ ಕೈಗೊಳ್ಳಲಾಗುತ್ತಿದೆ. ಎಲ್ಲಾ ರಾಜ್ಯ ಸಾರಿಗೆ ನಿಗಮಗಳು ಈ ಪ್ರಸ್ತಾವನೆಯನ್ನು ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಸಾರಿಗೆ ಇಲಾಖೆ ನಿರ್ದೇಶನ ನೀಡಿದೆ.

ಉದ್ದೇಶವೇನು?: ಸಾರ್ವಜನಿಕ ಬಸ್‌ಗಳನ್ನು, ವಿಶೇಷವಾಗಿ ಗ್ರಾಮೀಣ ಮತ್ತು ಹಿಂದುಳಿದ ಪ್ರದೇಶಗಳಲ್ಲಿ ಹೆಚ್ಚು ಅವಲಂಬಿಸಿರುವ ವಿದ್ಯಾರ್ಥಿಗಳ ಸುರಕ್ಷತೆಯನ್ನು ಸುಧಾರಿಸಲು ಮತ್ತು ವಿಶ್ವಾಸಾರ್ಹ ಸಾರಿಗೆ ಸೌಲಭ್ಯಗಳನ್ನು ಒದಗಿಸಲು ಈ ಉಪಕ್ರಮ ಪ್ರಯತ್ನಿಸುತ್ತದೆ. ಮಕ್ಕಳು ಬಸ್‌ಗಳಿಂದ ಬಿದ್ದು ಗಾಯಗೊಂಡ ಹಲವಾರು ಪ್ರಕರಣಗಳು ವರದಿಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹೀಗಾಗಿ, ಸುರಕ್ಷಿತ ವ್ಯವಸ್ಥೆಯ ಅಗತ್ಯವನ್ನು ಇದು ಎತ್ತಿ ತೋರಿಸುತ್ತದೆ. ಪ್ರಸ್ತುತ, ರಾಜ್ಯದಲ್ಲಿ ವಿದ್ಯಾರ್ಥಿನಿಯರಿಗೆ ಮಾತ್ರ ಉಚಿತ ಪ್ರಯಾಣ ಲಭ್ಯವಿದೆ.

ಜನದಟ್ಟಣೆ ಮತ್ತು ಪ್ರವೇಶ ಸಮಸ್ಯೆಗಳನ್ನು ಪರಿಹರಿಸಲು, ಯೋಜನೆ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳಿರುವ ಮಾರ್ಗಗಳಲ್ಲಿ, ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿ ವಿಶೇಷ ಶಾಲಾ ಮತ್ತು ಕಾಲೇಜು ಬಸ್‌ಗಳನ್ನು ಪರಿಚಯಿಸುವುದನ್ನು ಇದು ಒಳಗೊಂಡಿದೆ. ಶಾಲಾ ಸಮಯಕ್ಕೆ ಅನುಗುಣವಾಗಿ ಬೆಳಿಗ್ಗೆ ಮತ್ತು ಸಂಜೆ ಪೀಕ್ ಅವರ್​ಗಳಲ್ಲಿ ಹೆಚ್ಚುವರಿ ಟ್ರಿಪ್​ಗಳನ್ನು ಪ್ರಸ್ತಾಪಿಸಲಾಗಿದೆ.

ಸಾರಿಗೆ ಸಚಿವರು ಹೇಳಿದ್ದೇನು?: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಈ ವ್ಯವಸ್ಥೆಯನ್ನು ಹಂತ ಹಂತವಾಗಿ ಜಾರಿಗೆ ತರಲಾಗುವುದು ಎಂದು ಹೇಳಿದ್ದಾರೆ. "ರಾಜ್ಯದಲ್ಲಿ ಮಕ್ಕಳಸ್ನೇಹಿ ಸಾರಿಗೆ ವ್ಯವಸ್ಥೆಯನ್ನು ಪರಿಚಯಿಸಲಾಗುತ್ತಿದೆ. ಮೊದಲ ಹಂತದಲ್ಲಿ, ಬೆಂಗಳೂರಿನ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಜಾರಿಗೆ ತರಲಾಗುವುದು, ನಂತರ ಕ್ರಮೇಣ ವಿಸ್ತರಿಸಲಾಗುವುದು" ಎಂದು ತಿಳಿಸಿದರು. "ಈ ಉಪಕ್ರಮವನ್ನು ಬೆಂಬಲಿಸಲು ಹೆಚ್ಚಿನ ಬಸ್​ಗಳನ್ನು ಖರೀದಿಸಲು ಪ್ರಯತ್ನಿಸಲಾಗುತ್ತಿದೆ" ಎಂದೂ ಹೇಳಿದ್ದಾರೆ.

ಪ್ರಸ್ತಾವಿತ ಚೌಕಟ್ಟಿನಲ್ಲಿ ಹಲವಾರು ಸುರಕ್ಷತಾ ಕ್ರಮಗಳಿವೆ. ಎಲ್ಲಾ ಬಸ್​ಗಳು ಸಿಸಿಟಿವಿ ಕ್ಯಾಮೆರಾಗಳು, ಜಿಪಿಎಸ್ ಟ್ರ್ಯಾಕಿಂಗ್ ವ್ಯವಸ್ಥೆಗಳು ಮತ್ತು ತುರ್ತು ಪ್ಯಾನಿಕ್ ಬಟನ್​ಗಳನ್ನು ಹೊಂದಿರಬೇಕಿದೆ. ಪ್ರತಿ ಬಸ್​ನಲ್ಲಿ ಮಕ್ಕಳ ಸಹಾಯವಾಣಿ ಸಂಖ್ಯೆ 1098 ಪ್ರದರ್ಶಿಸುವುದು ಕಡ್ಡಾಯ. ಬಸ್ ಸೇವೆಗಳಲ್ಲಿ ಮಾರ್ಗ ಅನುಸರಣೆ ಮತ್ತು ಸಮಯವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಅಧಿಕಾರಿಗಳು ಯೋಜಿಸಿದ್ದಾರೆ.

ಇದರ ಜೊತೆಗೆ, ಚಾಲಕರು ಮತ್ತು ಸಾರಿಗೆ ಸಿಬ್ಬಂದಿ ಕಡ್ಡಾಯ ವಾರ್ಷಿಕ ರಿಫ್ರೆಶರ್​ ಕೋರ್ಸ್​ಗಳೊಂದಿಗೆ ಮಕ್ಕಳ ಹಕ್ಕುಗಳ ಕುರಿತು ತರಬೇತಿ ಪಡೆಯುತ್ತಾರೆ. ಈ ತರಬೇತಿ ಮಕ್ಕಳ ರಕ್ಷಣೆಗೆ ಸಂಬಂಧಿಸಿದ ಕಾನೂನುಗಳ ಅರಿವು ಒಳಗೊಂಡಿರುತ್ತದೆ. ಹೆಚ್ಚಿನ ಸಂಖ್ಯೆಯ ಹುಡುಗಿಯರಿರುವ ಮಾರ್ಗಗಳಲ್ಲಿ, ಮಹಿಳಾ ಕಂಡಕ್ಟರ್​ಗಳನ್ನು ನಿಯೋಜಿಸಲೂ ಶಿಫಾರಸು ಮಾಡಲಾಗಿದೆ.

ವಿದ್ಯಾರ್ಥಿಗಳಿಗೆ ಸುರಕ್ಷಿತ ಮತ್ತು ಹೆಚ್ಚು ಸುಲಭವಾಗಿ ಲಭ್ಯವಾಗುವಂತಹ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ನಿರ್ಮಿಸುವುದು, ಅವರ ನಿರಂತರ ಶಿಕ್ಷಣಕ್ಕೆ ಬೆಂಬಲ ನೀಡುವುದು ಈ ಉಪಕ್ರಮದ ಉದ್ದೇಶ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Ads on article

Advertise in articles 1

advertising articles 2

Advertise under the article