ಬೆಂಗಳೂರು :ಗುಡುಗು ಸಹಿತ ಆಲಿಕಲ್ಲು ಮಳೆಯ ಅಬ್ಬರ : ಆರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್...!!!
Tuesday, May 12, 2026

ಬೆಂಗಳೂರು: ಉತ್ತರ ಕರ್ನಾಟಕದಲ್ಲಿ ಗುಡುಗು ಸಹಿತ ಆಲಿಕಲ್ಲು ಮಳೆಯ ಅಬ್ಬರ ಜೋರಾಗಿಯೇ ಇರಲಿದ್ದು, ಆರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಇನ್ನೂ 2-3 ದಿನಗಳ ಕಾಲ ರಾಜ್ಯದಲ್ಲಿ ಆಲಿಕಲ್ಲು ಮಳೆಯಾಗುವ ಸಂಭವವಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಕಳೆದ ಹಲವು ದಿನಗಳಿಂದ ಹೀಟ್ ವೇವ್ ಅಲರ್ಟ್ ಇತ್ತು. ಅದರ ಜೊತೆಗೆ ಸಾಧಾರಣ ಮಳೆಯೂ ಅಲ್ಲಲ್ಲಿ ಕಂಡು ಬರುತ್ತಿತ್ತು. ಆದರೆ ಇಂದು ಬಿಸಿ ಬಿಸಿಯಾಗಿದ್ದ ಕಡಲ ನಾಡಿನಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ತಿಳಿಸಿದೆ.
ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ 40-50 ಕಿ.ಮೀ ವೇಗದ ಗಾಳಿಯ ಜೊತೆಗೆ ಗುಡುಗು ಸಹಿತ ಆಲಿಕಲ್ಲು ಮಳೆ ರಭಸದಿಂದ ಸುರಿಯಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.