ಬೆಳ್ತಂಗಡಿ: ಇಬ್ಬರು ಅಂತಾರಾಜ್ಯ ಕಳ್ಳರ ಅರೆಸ್ಟ್- 23.67ಲಕ್ಷ ಮೊತ್ತದ ನಗನಗದು ವಶಕ್ಕೆ

ಬೆಳ್ತಂಗಡಿ: ಇಬ್ಬರು ಅಂತಾರಾಜ್ಯ ಕಳ್ಳರ ಅರೆಸ್ಟ್- 23.67ಲಕ್ಷ ಮೊತ್ತದ ನಗನಗದು ವಶಕ್ಕೆ


ಬೆಳ್ತಂಗಡಿ: ಇಲ್ಲಿನ ಉಪವಿಭಾಗ ವ್ಯಾಪ್ತಿಯಲ್ಲಿ ನಡೆದ ಕಳವು ಪ್ರಕರಣಗಳಿಗೆ ಸಂಬಂಧಿಸಿದಂತೆ ಇಬ್ಬರು ಅಂತರಾಜ್ಯ ಕಳ್ಳರ ಬಂಧಿಸಿದ ಪೊಲೀಸರು 23,67,000 ರೂ‌. ಮೌಲ್ಯದ ನಗ ನಗದು ವಶಪಡಿಸಿಕೊಂಡಿದ್ದಾರೆ.
ಎ.5ರಂದು ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯೊಂದರಲ್ಲಿ ನಡೆದ ಚಿನ್ನಾಭರಣ ಮತ್ತು ನಗದು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ತನಿಖೆ ಚುರುಕುಗೊಳಿಸಿದ ಪೊಲೀಸರು ಮೇ 15ರಂದು ಆರೋಪಿತ ಸದ್ಯ ಕಾಸರಗೋಡಿನಲ್ಲಿ ವಾಸವಿರುವ ಬಂಟ್ವಾಳ ಕೊಳ್ನಾಡು ನಿವಾಸಿ ಹಮೀದ್ ಎಂಬಾತನನ್ನು ವಶಕ್ಕೆ ಪಡೆದಿದ್ದರು. ಅಲ್ಲದೆ ತಂಡ ಕೃತ್ಯಕ್ಕೆ ಬಳಸಿದ ಕಾರನ್ನು ಸ್ವಾಧೀನಪಡಿಸಿ, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. 

ವಿಚಾರಣೆ ವೇಳೆ ಆರೋಪಿ ನೀಡಿದ ಮಾಹಿತಿಯ ಅಧಾರದಲ್ಲಿ ಜೂನ್ 7ರಂದು ಮತ್ತೋರ್ವ ಆರೋಪಿ ಸದ್ಯ ಕಾಸರಗೋಡಿನಲ್ಲಿ ವಾಸವಿರುವ ಬಂಟ್ವಾಳ ಕೊಳ್ನಾಡು ನಿವಾಸಿ ಜಾಬೀರ್ ಅಲಿಯಾಸ್ ಜಾಬೀ (38) ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ. 

ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದ ಸುಮಾರು 68.690 ಗ್ರಾಂ ಚಿನ್ನಾಭರಣ ಹಾಗೂ 2,00,000ರೂ. ನಗದು ಮತ್ತು ಉಪ್ಪಿನಂಗಡಿ ಪೊಲೀಸ್‌ ಠಾಣಾ ಅ.ಕ್ರ: 28/2025 ಪ್ರಕರಣಕ್ಕೆ ಸಂಬಂಧಿಸಿದ 21.810 ಗ್ರಾಂ ಚಿನ್ನಾಭರಣ ಹಾಗೂ ಕೃತ್ಯಕ್ಕೆ ಬಳಸಿದ ಕಾರನ್ನು ಸ್ವಾಧೀನಪಡಿಸಿಕೊಂಡಿದ್ದಾರೆ. ಈ ಸೊತ್ತುಗಳ ಒಟ್ಟು ಮೌಲ್ಯ 23,67,000ರೂ. ಆಗಿರುತ್ತದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿ ನ್ಯಾಯಾಂಗ ಬಂಧನ ವಿಧಿಸಿರುತ್ತದೆ. 

ಈ ಪ್ರಕರಣಗಳನ್ನು ಹೊರತುಪಡಿಸಿದಂತೆ ಆರೋಪಿಗಳು ಉಪ್ಪಿನಂಗಡಿ ಠಾಣಾ ವ್ಯಾಪ್ತಿ, ಬಂಟ್ವಾಳ ನಗರ ಠಾಣಾ ವ್ಯಾಪ್ತಿ ಹಾಗೂ ಬೆಳ್ತಂಗಡಿ‌ ಠಾಣಾ ವ್ಯಾಪ್ತಿಯಲ್ಲಿ ತಲಾ ಒಂದು ಪ್ರಕರಣ ಸೇರಿದಂತೆ ಒಟ್ಟು 5 ಪ್ರಕರಣಗಳಲ್ಲಿ ಭಾಗಿಯಾಗಿರುವುದು ತಿಳಿದುಬಂದಿದೆ. ಈ ಬಗ್ಗೆ ತನಿಖೆ ಮುಂದುವರಿಯುತ್ತದೆ.

Ads on article

Advertise in articles 1

advertising articles 2

Advertise under the article