ದಾವಣಗೆರೆ :ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಮುಖ್ಯಶಿಕ್ಷಕ ಪ್ರಕರಣ: 5 ಶಿಕ್ಷಕರು ಸೇರಿದಂತೆ 10 ಮಂದಿಯ ವಿರುದ್ಧ ಎಫ್ಐಆರ್..!!

ದಾವಣಗೆರೆ :ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಮುಖ್ಯಶಿಕ್ಷಕ ಪ್ರಕರಣ: 5 ಶಿಕ್ಷಕರು ಸೇರಿದಂತೆ 10 ಮಂದಿಯ ವಿರುದ್ಧ ಎಫ್ಐಆರ್..!!

ದಾವಣಗೆರೆ :ಜಿಲ್ಲೆಯ ಹರಿಹರ ತಾಲೂಕಿನ ಕೊಕ್ಕನೂರು ಸರ್ಕಾರಿ ಶಾಲೆಯ ಮುಖ್ಯಶಿಕ್ಷಕ ಜಯಪ್ಪ (54) ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಪ್ರಕರಣ ಸಂಬಂಧ ಐವರು ಶಿಕ್ಷಕರು, ನಾಲ್ವರು ಬಿಸಿಯೂಟ ಸಿಬ್ಬಂದಿ ಹಾಗೂ ಶಿಕ್ಷಣ ಇಲಾಖೆಯ ಇಬ್ಬರು ಅಧಿಕಾರಿಗಳು ಸೇರಿದಂತೆ 10 ಮಂದಿಯ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಜಯಪ್ಪ ಅವರ ಪತ್ನಿ ಅಂಜನಮ್ಮ ನೀಡಿದ ದೂರಿನ ಆಧಾರದ ಮೇಲೆ ಮಾನಸಿಕ ಕಿರುಕುಳ, ಜಾತಿ ನಿಂದನೆ ಹಾಗೂ ಹಿಂಸೆ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ. ಕಳೆದ ಹಲವು ತಿಂಗಳುಗಳಿಂದ ಸಹೋದ್ಯೋಗಿಗಳಿಂದ ನಿರಂತರ ಮಾನಸಿಕ ಹಿಂಸೆ ಮತ್ತು ಅವಮಾನ ಎದುರಿಸುತ್ತಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

“ನಾವು ಪರಿಶಿಷ್ಟ ಜಾತಿಗೆ ಸೇರಿದವರಾಗಿದ್ದರಿಂದ ಪದೇ ಪದೇ ಜಾತಿ ನಿಂದನೆ ಮಾಡಲಾಗುತ್ತಿತ್ತು. ಈ ಬಗ್ಗೆ ಪತಿ ಹಲವು ಬಾರಿ ನೋವು ತೋಡಿಕೊಂಡಿದ್ದರು. ಇದೇ ಮಾನಸಿಕ ಒತ್ತಡ ಅವರ ಆತ್ಮಹತ್ಯೆಗೆ ಕಾರಣವಾಗಿದೆ” ಎಂದು ಅಂಜನಮ್ಮ ಆರೋಪಿಸಿದ್ದಾರೆ.

ಶಾಲೆಯಲ್ಲಿ ಶಿಕ್ಷಕರು, ಅಡುಗೆ ಸಿಬ್ಬಂದಿ ಹಾಗೂ ಮುಖ್ಯಶಿಕ್ಷಕರ ನಡುವೆ ಮನಸ್ತಾಪ ಉಂಟಾಗಿದ್ದು, ಈ ವಿಚಾರವಾಗಿ ಎಸ್‌ಡಿಎಂಸಿ ಸದಸ್ಯರು ಮತ್ತು ಗ್ರಾಮದ ಹಿರಿಯರ ಸಮ್ಮುಖದಲ್ಲಿ ಸಂಧಾನ ಸಭೆ ನಡೆಸಲಾಗಿತ್ತು. ಇದೇ ವೇಳೆ ಶಾಲೆಯ ಶೌಚಾಲಯಕ್ಕೆ ತೆರಳಿದ್ದ ಜಯಪ್ಪ ವಿಷ ಸೇವಿಸಿದ್ದರು. ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದರು.ಪ್ರಕರಣದ ತನಿಖೆಯನ್ನು ಮಲೆಬೆನ್ನೂರು ಪೊಲೀಸರು ಮುಂದುವರಿಸಿದ್ದಾರೆ.

Ads on article

Advertise in articles 1

advertising articles 2

Advertise under the article