ಬೆಂಗಳೂರು :  ಕರ್ನಾಟಕ CET Result 2026 ಕೆಸಿಇಟಿ ಫಲಿತಾಂಶ ಪ್ರಕಟ; ಈ ಬಾರಿಯೂ ಹೆಣ್ಣು ಮಕ್ಕಳೇ ಮೇಲುಗೈ!

ಬೆಂಗಳೂರು : ಕರ್ನಾಟಕ CET Result 2026 ಕೆಸಿಇಟಿ ಫಲಿತಾಂಶ ಪ್ರಕಟ; ಈ ಬಾರಿಯೂ ಹೆಣ್ಣು ಮಕ್ಕಳೇ ಮೇಲುಗೈ!

Karnataka CET Result 2026 ಕೆಸಿಇಟಿ ಫಲಿತಾಂಶ ಪ್ರಕಟ; ಈ ಬಾರಿಯೂ ಹೆಣ್ಣು ಮಕ್ಕಳೇ ಮ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು  2026ರ UGCET ಫಲಿತಾಂಶಗಳನ್ನು ಘೋಷಿಸಿದೆ. ಇಂಜಿನಿಯರಿಂಗ್ ಮತ್ತು ವೆಟರ್ನರಿ ವಿಭಾಗ ಎರಡರಲ್ಲೂ ಹೆಣ್ಣುಮಕ್ಕಳೇ ಮೇಲುಗೈ ಸಾಧಿಸಿದ್ದಾರೆ.

ಬೆಂಗಳೂರಿನ ತನಿಷಾ ಕಾರ್ತಿಕ್ ಇಂಜಿನಿಯರಿಂಗ್‌ನಲ್ಲಿ ಹಾಗೂ ನಯನ ಗೋಪಿ ವೆಟರ್ನರಿಯಲ್ಲಿ ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ಪಡೆದಿದ್ದಾರೆ. ಆರ್.ವಿ. ಪಿಯು ಕಾಲೇಜು ಟಾಪರ್ಸ್ ಪಟ್ಟಿಯಲ್ಲಿ ಉತ್ತಮ ಪ್ರದರ್ಶನ ನೀಡಿದೆ.

ರಾಜ್ಯಾದ್ಯಂತ ತೀವ್ರ ಕುತೂಹಲ ಮೂಡಿಸಿದ್ದ ಇಂಜಿನಿಯರಿಂಗ್ ವಿಭಾಗದ ಫಲಿತಾಂಶದಲ್ಲಿ ಬೆಂಗಳೂರಿನ ವಿದ್ಯಾರ್ಥಿನಿ ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ಪಡೆದು ಬೀಗಿದ್ದಾರೆ. ಬೆಂಗಳೂರಿನ ಜಯನಗರದಲ್ಲಿರುವ ಪ್ರತಿಷ್ಠಿತ ಆರ್​.ವಿ ಪಿಯು ಕಾಲೇಜಿನ ವಿದ್ಯಾರ್ಥಿನಿ ತನಿಷಾ ಕಾರ್ತಿಕ್ ಅವರು ಇಂಜಿನಿಯರಿಂಗ್ ವಿಭಾಗದಲ್ಲಿ ಇಡೀ ರಾಜ್ಯಕ್ಕೆ ಪ್ರಥಮ ಸ್ಥಾನ ಅಲಂಕರಿಸಿದ್ದಾರೆ. ಇನ್ನುಳಿದಂತೆ ಇದೇ ವಿಭಾಗದಲ್ಲಿ ಸೃಜನ್​ ದ್ವಿತೀಯ ಸ್ಥಾನ ಪಡೆದರೆ, ನಿನಾದ್ ವಿಶಿಷ್ಟ ಅವರು ತೃತೀಯ ಸ್ಥಾನವನ್ನು ತಮ್ಮದಾಗಿಸಿಕೊಂಡಿದ್ದಾರೆ.

ಪರೀಕ್ಷೆ ಬರೆದಿರುವ ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್‌ಗಳಾದ cetonline.karnataka.gov.in/kea/ ಅಥವಾ karresults.nic.in ಗೆ ಭೇಟಿ ನೀಡುವ ಮೂಲಕ ತಮ್ಮ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ. ವೆಬ್‌ಸೈಟ್‌ನಲ್ಲಿ ನಿಮ್ಮ ರಿಜಿಸ್ಟರ್ ನಂಬರ್ ನಮೂದಿಸಿ ಸ್ಕೋರ್‌ಕಾರ್ಡ್ ಅನ್ನು ಆನ್‌ಲೈನ್ ಮೂಲಕ ಸುಲಭವಾಗಿ ಡೌನ್‌ಲೋಡ್ ಮಾಡಿಕೊಳ್ಳಬಹುದು.


Ads on article

Advertise in articles 1

advertising articles 2

Advertise under the article