ಮಂಗಳೂರು :ಬಸ್‌ನಲ್ಲಿ ಗುಪ್ತಾಂಗ ಪ್ರದರ್ಶಿಸಿ ವಿದ್ಯಾರ್ಥಿನಿಗೆ ಕಿರುಕುಳ; ಆರೋಪಿ ಇರ್ಫಾನ್ ಬಂಧನ.
Friday, July 10, 2026
ಮಂಗಳೂರು: ಕಾಲೇಜು ವಿದ್ಯಾರ್ಥಿನಿಯರಿಗೆ ಬಸ್‌ನಲ್ಲಿ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಖಾಸಗಿ ಬಸ್ ಕಂಡಕ್ಟರ್‌ನನ್ನು ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
ಬಂಧಿತನನ್ನು ಇರ್ಫಾನ್ (32), ತಂದೆ ಅಬುಸಾಲಿ, ಮೂಲ ನಿವಾಸಿ ಕಲ್ಲೇರಿ ಮನೆ, ಉಪ್ಪಿನಂಗಡಿ, ದಕ್ಷಿಣ ಕನ್ನಡ ಎಂದು ಗುರುತಿಸಲಾಗಿದೆ. ಪ್ರಸ್ತುತ ಆತ ಅಬುಬಕರ್ ಅವರ ಬಾಡಿಗೆ ಮನೆಯಲ್ಲಿ, ಕರ್ವೇಲು, ಉಪ್ಪಿನಂಗಡಿಯಲ್ಲಿ ವಾಸವಾಗಿದ್ದಾನೆ. ಆರೋಪಿತನು ಸೆಲೇನ (ಮಂಗಳೂರು–ವಿಟ್ಲ) ಖಾಸಗಿ ಬಸ್‌ನಲ್ಲಿ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದಾನೆ.
ಪೊಲೀಸರ ಮಾಹಿತಿ ಪ್ರಕಾರ, ಜುಲೈ 9, 2026ರಂದು ಸಂಜೆ ಸುಮಾರು 5 ಗಂಟೆ ವೇಳೆಗೆ, ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿನಿಯರನ್ನು ಗುರಿಯಾಗಿಸಿಕೊಂಡು ಆರೋಪಿತನು ತನ್ನ ಗುಪ್ತಾಂಗವನ್ನು ಪ್ರದರ್ಶಿಸಿ ಅಸಭ್ಯ ಸನ್ನೆಗಳನ್ನು ಮಾಡಿದ್ದಾನೆ. ಅಲ್ಲದೆ, "ಹಿಂದಿನ ಸೀಟಿಗೆ ಬಾ" ಎಂದು ವಿದ್ಯಾರ್ಥಿನಿಯರನ್ನು ಕರೆದು ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ.
ಈ ಸಂಬಂಧ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಜುಲೈ 10, 2026ರಂದು ಆರೋಪಿಯನ್ನು ಬಂಧಿಸಿ ಮುಂದಿನ ತನಿಖೆ ಕೈಗೊಳ್ಳಲಾಗಿದೆ.