ಮೂಡುಬಿದಿರೆ: ಬಾಡಿಗೆ ಮನೆಯಲ್ಲಿ ಸಿಲಿಂಡರ್ ಸ್ಫೋಟ: ಒಂದೇ ಮನೆಯ ಮೂವರಿಗೆ ಗಾಯ..!!

ಮೂಡುಬಿದಿರೆ: ಬಾಡಿಗೆ ಮನೆಯಲ್ಲಿ ಸಿಲಿಂಡರ್ ಸ್ಫೋಟ: ಒಂದೇ ಮನೆಯ ಮೂವರಿಗೆ ಗಾಯ..!!

ಮಂಗಳೂರು: ಮೂಡುಬಿದಿರೆ ತಾಲೂಕಿನಲ್ಲಿರುವ ಮಿಜಾರ್ ಸಮೀಪ ಬಾಡಿಗೆ ಮನೆಯೊಂದರಲ್ಲಿ ಮಂಗಳವಾರ ಬೆಳಗ್ಗೆ ಸುಮಾರು 6.30ರ ವೇಳೆಗೆ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಒಂದೇ ಮನೆಯ ಮೂವರು ಗಾಯಗೊಂಡ ಘಟನೆ ನಡೆದಿದೆ.

ಆಳ್ವಾಸ್ ಕಾಲೇಜಿನಲ್ಲಿ ವಾಚ್‌ಮನ್ ಆಗಿ ಕೆಲಸ ಮಾಡುತ್ತಿರುವ ಶಿವರಾಮ (31), ಅವರ ಪತ್ನಿ ಗಂಗಾ (25) ಹಾಗೂ ಪುತ್ರ ಆದರ್ಶ್ (6) ಅವರಿಗೆ ಸಿಲಿಂಡರ್ ಸ್ಫೋಟದಿಂದ ಸುಟ್ಟ ಗಾಯಗಳಾಗಿವೆ.

ಶಿವರಾಮ ಅವರಿಗೆ ತೀವ್ರ ಸ್ವರೂಪದ ಸುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿಲಿಂಡರ್ ಸ್ಫೋಟಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನೆ ಕುರಿತು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

Ads on article

Advertise in articles 1

advertising articles 2

Advertise under the article