ದೆಹಲಿ :ಕೇಂದ್ರ ಆರೋಗ್ಯ ಸಚಿವ ನಡ್ಡಾ ಅಸ್ವಸ್ಥ: ಆಸ್ಪತ್ರೆಗೆ ದಾಖಲುHealth Minister Nadda unwell
Friday, August 14, 2026

ಗುರುವಾರ (ಆಗಸ್ಟ್ 13) ಸಂಜೆ ಆರೋಗ್ಯದಲ್ಲಿ ಏರುಪೇರಾದ ಕಾರಣ ಅವರನ್ನು ತಕ್ಷಣ ಆಸ್ಪತ್ರೆಗೆ ಕರೆತರಲಾಗಿದ್ದು, ಕೊರೊನರಿ ಆಂಜಿಯೋಗ್ರಫಿ (Coronary Angiography) ಸೇರಿದಂತೆ ಅಗತ್ಯ ವೈದ್ಯಕೀಯ ತಪಾಸಣೆಗಳನ್ನು ನಡೆಸಲಾಗಿದೆ.
ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅವರಲ್ಲಿ ಅಸ್ವಸ್ಥತೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಗಸ್ಟ್ 13ರ ಸಂಜೆ ಕೊರೊನರಿ ಆಂಜಿಯೋಗ್ರಫಿ ಸೇರಿದಂತೆ ಹಲವು ತಪಾಸಣೆಗಳನ್ನು ನಡೆಸಲಾಯಿತು. ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಏಮ್ಸ್‌ನ ಹೃದ್ರೋಗ ವಿಭಾಗದಲ್ಲಿ (Cardiology Department) ವೈದ್ಯರ ನಿಗಾದಲ್ಲಿ ಇರಿಸಲಾಗಿದೆ” ಎಂದು ಆಸ್ಪತ್ರೆ ತನ್ನ ಅಧಿಕೃತ ಹೇಳಿಕೆಯಲ್ಲಿ ಸ್ಪಷ್ಟಪಡಿಸಿದೆ.