ಪುತ್ತೂರು ಚಲೋ ಕಾರ್ಯಕ್ರಮಕ್ಕೆ ಷರತ್ತುಬದ್ಧ ಅನುಮತಿ; ನಗರದಲ್ಲಿ ಪೊಲೀಸ್ ಪಥಸಂಚಲನ.

ಪುತ್ತೂರು ಚಲೋ ಕಾರ್ಯಕ್ರಮಕ್ಕೆ ಷರತ್ತುಬದ್ಧ ಅನುಮತಿ; ನಗರದಲ್ಲಿ ಪೊಲೀಸ್ ಪಥಸಂಚಲನ.


ಪುತ್ತೂರು: ಆಗಸ್ಟ್ 31, 2026ರಂದು ನಡೆಯಲಿರುವ ‘ಪುತ್ತೂರು ಚಲೋ’ ಕಾರ್ಯಕ್ರಮಕ್ಕೆ ಷರತ್ತುಬದ್ಧ ಅನುಮತಿ ನೀಡಲಾಗಿದೆ.

ಕಾರ್ಯಕ್ರಮದ ಹಿನ್ನೆಲೆಯಲ್ಲಿ ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭದ್ರತಾ ಕ್ರಮಗಳನ್ನು ಬಿಗಿಗೊಳಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಪೊಲೀಸ್ ಪಥಸಂಚಲನ ನಡೆಸಲಾಗಿದೆ.

ಕಾರ್ಯಕ್ರಮಕ್ಕೆ ವ್ಯಾಪಕ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.

ನಿಯೋಜಿಸಲಾದ ಪೊಲೀಸ್ ಸಿಬ್ಬಂದಿ ವಿವರ:

  • ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (Additional SP) – 01
  • ಡಿವೈಎಸ್‌ಪಿ – 01
  • ಪೊಲೀಸ್ ಇನ್ಸ್‌ಪೆಕ್ಟರ್ (PI) – 03
  • ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (PSI) – 10
  • ಸಹಾಯಕ ಸಬ್ ಇನ್ಸ್‌ಪೆಕ್ಟರ್ (ASI) – 14
  • ಪೊಲೀಸ್ ಸಿಬ್ಬಂದಿಗಳು – 139

ಇದರೊಂದಿಗೆ ಹೆಚ್ಚುವರಿ ಭದ್ರತೆಗಾಗಿ ನಿಯೋಜಿಸಿರುವ ತುಕುಡಿಗಳು

  • ಕೆಎಸ್‌ಆರ್‌ಪಿ ತುಕಡಿಗಳು – 05
  • ಎಸ್‌ಎಎಫ್ ತಂಡಗಳು – 02
  • ಡಿಎಆರ್ ತುಕಡಿಗಳು – 07

‘ಪುತ್ತೂರು ಚಲೋ’ ಕಾರ್ಯಕ್ರಮದ ಹಿನ್ನೆಲೆಯಲ್ಲಿ ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆ ಅಗತ್ಯ ಭದ್ರತಾ ಕ್ರಮಗಳನ್ನು ಕೈಗೊಂಡಿದೆ.

Ads on article

Advertise in articles 1

advertising articles 2

Advertise under the article