ಸುರತ್ಕಲ್‌ನಲ್ಲಿ ವಾಲಿಬಾಲ್ ಆಡುತ್ತಿದ್ದ ವೇಳೆ ಕುಸಿದು ಬಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಾವು

ಸುರತ್ಕಲ್‌ನಲ್ಲಿ ವಾಲಿಬಾಲ್ ಆಡುತ್ತಿದ್ದ ವೇಳೆ ಕುಸಿದು ಬಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಾವು

ಸುರತ್ಕಲ್, ಆ. 6: ಸ್ನೇಹಿತರೊಂದಿಗೆ ವಾಲಿಬಾಲ್ ಆಡುತ್ತಿದ್ದ ವೇಳೆ 15 ವರ್ಷದ ಬಾಲಕನೊಬ್ಬ ಹಠಾತ್ ಕುಸಿದು ಬಿದ್ದು ಮೃತಪಟ್ಟಿರುವ ದುರ್ಘಟನೆ ಸುರತ್ಕಲ್ ಸಮೀಪದ ಸೂರಿಂಜೆ ಗ್ರಾಮದಲ್ಲಿ ಬುಧವಾರ ನಡೆದಿದೆ.

ಮೃತ ಬಾಲಕನನ್ನು ಲಿಖಿತ್ ಅಮೀನ್ (15) ಎಂದು ಗುರುತಿಸಲಾಗಿದೆ. ಆತ ಸೂರಿಂಜೆ ಕೋಟೆ ಬೋಳ್ಳಾರು ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ವ್ಯಾಸಂಗ ಮಾಡುತ್ತಿದ್ದನು. ಓದಿನ ಜೊತೆಗೆ ಕ್ರೀಡೆಯಲ್ಲೂ ಅಪಾರ ಆಸಕ್ತಿ ಹೊಂದಿದ್ದ ವಿದ್ಯಾರ್ಥಿಯಾಗಿದ್ದ ಎಂದು ತಿಳಿದುಬಂದಿದೆ.

ಲಭ್ಯ ಮಾಹಿತಿಯ ಪ್ರಕಾರ, ಲಿಖಿತ್ ತನ್ನ ಸ್ನೇಹಿತರೊಂದಿಗೆ ಸೂರಿಂಜೆ ಮೈದಾನದಲ್ಲಿ ವಾಲಿಬಾಲ್ ಆಡುತ್ತಿದ್ದ ವೇಳೆ ಏಕಾಏಕಿ ಅಸ್ವಸ್ಥಗೊಂಡು ಮೈದಾನದಲ್ಲೇ ಕುಸಿದು ಬಿದ್ದಿದ್ದಾನೆ. ಸ್ಥಳದಲ್ಲಿದ್ದವರು ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ.

ಘಟನೆಯ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕ ಸಾವಿನ ಕಾರಣ ಸ್ಪಷ್ಟವಾಗುವ ಸಾಧ್ಯತೆ ಇದೆ.

ಸ್ಥಳೀಯರಲ್ಲಿ ಈ ಘಟನೆ ತೀವ್ರ ದುಃಖ ಮೂಡಿಸಿದ್ದು, ಬಾಲಕನ ಅಕಾಲಿಕ ನಿಧನಕ್ಕೆ ಸಂತಾಪ ವ್ಯಕ್ತವಾಗಿದೆ.

Ads on article

Advertise in articles 1

advertising articles 2

Advertise under the article