ಬೆಂಗಳೂರು : ರೇಷನ್ ಕಾರ್ಡ್ ತಿದ್ದುಪಡಿಗೆ ಮತ್ತೊಮ್ಮೆ ಅವಕಾಶ: ಹೆಸರು, ವಿಳಾಸ ಬದಲಾವಣೆ ಹಾಗೂ ಹೊಸ ಸದಸ್ಯರ ಸೇರ್ಪಡೆಗೆ ಬೇಕಾಗುವ ದಾಖಲೆಗಳು ಇಲ್ಲಿವೆ!

ಬೆಂಗಳೂರು : ರೇಷನ್ ಕಾರ್ಡ್ ತಿದ್ದುಪಡಿಗೆ ಮತ್ತೊಮ್ಮೆ ಅವಕಾಶ: ಹೆಸರು, ವಿಳಾಸ ಬದಲಾವಣೆ ಹಾಗೂ ಹೊಸ ಸದಸ್ಯರ ಸೇರ್ಪಡೆಗೆ ಬೇಕಾಗುವ ದಾಖಲೆಗಳು ಇಲ್ಲಿವೆ!

ಬೆಂಗಳೂರು :ಪಡಿತರ ಚೀಟಿಯು ಪ್ರಮುಖ ದಾಖಲೆಗಳಲ್ಲಿ ಒಂದಾಗಿದ್ದು, ರೇಷನ್ ಪಡೆಯಲು ಮಾತ್ರವಲ್ಲದೆ ಸರ್ಕಾರಿ ಸೌಲಭ್ಯಗಳಿಗೆ ಅರ್ಜಿ ಸಲ್ಲಿಸಲು ಕಡ್ಡಾಯವಾಗಿ ಬೇಕಾಗುತ್ತದೆ. ಇದೀಗ ಪಡಿತರ ಚೀಟಿಯ ತಿದ್ದುಪಡಿ ಹಾಗೂ ಹೊಸ ಸದಸ್ಯರ ಸೇರ್ಪಡೆಗೆ ಅವಕಾಶ ಕಲ್ಪಿಸಲಾಗಿದ್ದು, ಬೆಳಿಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಎಲ್ಲೆಲ್ಲಿ ಅರ್ಜಿ ಸಲ್ಲಿಸಬಹುದು?: ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ ಒನ್ ಹಾಗೂ ಸೈಬರ್ ಸೆಂಟರ್‌ಗಳಲ್ಲಿ ತಿದ್ದುಪಡಿಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್ ahara.kar.nic.in ಗೆ ಭೇಟಿ ನೀಡಬಹುದು.

​ಏನೆಲ್ಲಾ ತಿದ್ದುಪಡಿ ಮಾಡಿಸಬಹುದು?: ಹೆಸರು ತಿದ್ದುಪಡಿ, ಹೊಸ ಸದಸ್ಯರ ಹೆಸರು ಸೇರ್ಪಡೆ, ಹೆಸರು ತೆಗೆದುಹಾಕುವಿಕೆ, ವಿಳಾಸ ಬದಲಾವಣೆ, ಫೋಟೋ ಬದಲಾವಣೆ, ಕುಟುಂಬ ಮುಖ್ಯಸ್ಥರ ಬದಲಾವಣೆ ಹಾಗೂ ನ್ಯಾಯಬೆಲೆ ಅಂಗಡಿ ಬದಲಾವಣೆ ಮಾಡಿಕೊಳ್ಳಲು ಅವಕಾಶವಿದೆ.

​ಅಗತ್ಯವಿರುವ ಮುಖ್ಯ ದಾಖಲೆಗಳು: ಎಲ್ಲಾ ಸದಸ್ಯರ ಆಧಾರ್ ಕಾರ್ಡ್, ಪ್ರಸ್ತುತ ಇರುವ ರೇಷನ್ ಕಾರ್ಡ್, ಕುಟುಂಬದ ಫೋಟೋ, ವಿಳಾಸದ ಪುರಾವೆ (ವಿದ್ಯುತ್ ಬಿಲ್), 6 ವರ್ಷ ಮೇಲ್ಪಟ್ಟವರಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಹಾಗೂ 6 ವರ್ಷದ ಒಳಗಿನ ಮಕ್ಕಳಿದ್ದರೆ ಜನನ ಪ್ರಮಾಣ ಪತ್ರ ಬೇಕಾಗುತ್ತದೆ.

​ಹೆಸರು ಸೇರ್ಪಡೆಗೆ ಬೇಕಾಗುವ ದಾಖಲೆಗಳು: ಪತ್ನಿಯ ಹೆಸರು ಸೇರ್ಪಡೆಗೆ ಆಧಾರ್ ಕಾರ್ಡ್, ಮದುವೆ ಪ್ರಮಾಣ ಪತ್ರ ಹಾಗೂ ಪೋಷಕರ ಪಡಿತರ ಚೀಟಿ ಅಗತ್ಯ. ಮಗುವಿನ ಹೆಸರು ಸೇರ್ಪಡೆಗೆ ಮಗುವಿನ ಜನನ ಪ್ರಮಾಣಪತ್ರ ಮತ್ತು ಪೋಷಕರ ಆಧಾರ್ ಕಾರ್ಡ್ ಕಡ್ಡಾಯ.

​ಅರ್ಜಿ ಸಲ್ಲಿಸುವ ವಿಧಾನ: ಅಧಿಕೃತ ವೆಬ್‌ಸೈಟ್ (ahara.kar.nic.in) ಗೆ ಭೇಟಿ ನೀಡಿ, ‘ಇ-ಸೇವೆಗಳು’ ಆಯ್ಕೆಯಡಿ ತಿದ್ದುಪಡಿ/ಹೊಸ ಸೇರ್ಪಡೆ ಫಾರ್ಮ್ ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಿ ಸಬ್ಮಿಟ್ ಮಾಡಬೇಕು.

ನೆನಪಿರಲಿ: ಪ್ರಸ್ತುತ ಪಡಿತರ ಚೀಟಿಯ ತಿದ್ದುಪಡಿಗೆ ಮಾತ್ರ ಅವಕಾಶ ನೀಡಲಾಗಿದ್ದು, ಹೊಸ ರೇಷನ್ ಕಾರ್ಡ್‌ಗೆ ಅರ್ಜಿ ಸಲ್ಲಿಕೆ ಇನ್ನು ಪ್ರಾರಂಭವಾಗಿಲ್ಲ.

Ads on article

Advertise in articles 1

advertising articles 2

Advertise under the article