ಬೆಂಗಳೂರು :ಡಿಸಿ‌ಎಂ ಪರಮೇಶ್ವರ್‌ಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು, ಸಿಎಂ ಭೇಟಿ

ಬೆಂಗಳೂರು :ಡಿಸಿ‌ಎಂ ಪರಮೇಶ್ವರ್‌ಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು, ಸಿಎಂ ಭೇಟಿ

ಬೆಂಗಳೂರು: ಉಪ ಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್ ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಸದ್ಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಪರಮೇಶ್ವರ್ ಅವರು ಇಂದು (ಅ.27) ಬೆಳಗ್ಗೆ ಬೆಂಗಳೂರಿನ ಬ್ಯಾಡ್ಮಿಟನ್ ಅಸೋಸಿಯೇಷನ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಈ ವೇಳೆ ಏಕಾಏಕಿ ಪರಮೇಶ್ವರ್ ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದು, ತಕ್ಷಣ ಆಸ್ಪತ್ರೆ ದಾಖಲಿಸಲಾಗಿದೆ. ಸದ್ಯ ಪರಮೇಶ್ವರ್ ಆರೋಗ್ಯ ಹೇಗಿದೆ ಎನ್ನುವ ಬಗ್ಗೆ ವೈದೇಹಿ ಆಸ್ಪತ್ರೆ ವೈದ್ಯರು ಮಾಹಿತಿ ನೀಡಿದ್ದಾರೆ.

ಪರಮೇಶ್ವರ್​ ಹೆಲ್ತ್​ ಅಪ್ಡೇಟ್, ಈಗ ಹೇಗಿದ್ದಾರೆ?

ಡಿಸಿಎಂ ಪರಮೇಶ್ವರ್ ಅವರಿಗೆ ಎದೆ ನೋವು ಕಾಣಿಸಿಕೊಳ್ತಿದ್ದಂತೆ ತಕ್ಷಣ ಅವರನ್ನ ಬೆಂಗಳೂರಿನ ವೈದೇಹಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಉಪಮುಖ್ಯಮಂತ್ರಿಗಳ ಆರೋಗ್ಯದ ಬಗ್ಗೆ ವೈದೇಹಿ ಆಸ್ಪತ್ರೆ ವೈದ್ಯ ಡಾ. ವಿಕೆ ಶ್ರೀನಿವಾಸ್ ಅವರು ಮಾಹಿತಿ ನೀಡಿದ್ದು, ಡಿಸಿಎಂ ಜಿ ಪರಮೇಶ್ವರ್ ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿಸಿದ್ದಾರೆ.

ಪರಮೇಶ್ವರ್ ಅವ್ರು ಬೆಳಗ್ಗೆ 10.30ಕ್ಕೆ ಆಸ್ಪತ್ರೆಗೆ ಬಂದ್ರು. ಅವರ ಆರೋಗ್ಯ ತಪಾಸಣೆ ನಡೆಸಿ, ಚಿಕಿತ್ಸೆ ನೀಡಲಾಗಿದೆ. ಹೃದಯಾಘಾತ ಏನು ಇಲ್ಲ‌, ಅವರ ಹಾರ್ಟ್ ಕೂಡ ಚೆನ್ನಾಗಿದೆ. ಯಾರು ಕೂಡ ಆಂತಕ ಪಡುವ ಅವಶ್ಯಕತೆ ಇಲ್ಲ. ಟ್ರೀಟ್ಮೆಂಟ್ ತಗೊಂಡಿದ್ದಾರೆ‌. ಅವರ ಆರೋಗ್ಯ ಕೂಡ ಈಗ ಸ್ಥಿರವಾಗಿದೆ ಎಂದಿದ್ದಾರೆ. ಇವತ್ತು ಸಂಜೆಯೇ ಉಪ ಮುಖ್ಯಮಂತ್ರಿ ಪರಮೇಶ್ವರ್​ ಅವರನ್ನ ಡಿಸ್ಚಾರ್ಜ್ ಮಾಡುವುದಾಗಿ ವೈದ್ಯರು ತಿಳಿಸಿದ್ದಾರೆ.

ಆದರೆ ಕೆಲ ವರದಿಗಳ ಪ್ರಕಾರ, ಪರಮೇಶ್ವರ್ ಅವರಿಗೆ ಹೃದಯಾಘಾತವಾಗಿದೆ ಎಂದು ಪ್ರಾಥಮಿಕ ಮಾಹಿತಿಗಳಿಂದ ತಿಳಿದುಬಂದಿದೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (CM D.K Shivakumar) ಅವರು ಆಸ್ಪತ್ರೆಗೆ ಭೇಟಿ ನೀಡಿ ಸಚಿವರ ಆರೋಗ್ಯ ವಿಚಾರಿಸಿದ್ದಾರೆ. ಸದ್ಯ ವೈದ್ಯರ ತಂಡವು ಅವರ ಆರೋಗ್ಯ ಸ್ಥಿತಿಯನ್ನು ತೀವ್ರವಾಗಿ ಮೇಲ್ವಿಚಾರಣೆ ಮಾಡುತ್ತಿದ್ದು, ಚಿಕಿತ್ಸೆ ಮುಂದುವರಿದಿದೆ ಎಂದು ತಿಳಿದುಬಂದಿದೆ. ಆರೋಗ್ಯ ಸಚಿವ ಯು.ಟಿ.ಖಾದರ್ ಆಸ್ಪತ್ರೆಗೆ ತೆರಳಿ ಪರಮೇಶ್ವರ್ ಅವರ ಆರೋಗ್ಯ ವಿಚಾರಿಸಿದರು. ಡಿಸಿಎಂ ಆರೋಗ್ಯದ ಬಗ್ಗೆ ಸಿಎಂ ಡಿ.ಕೆ.ಶಿವಕುಮಾರ್ ವೈದ್ಯರಿಂದ ಮಾಹಿತಿ ಪಡೆದರು.

ವಸಂತನಗರದ ಬ್ಯಾಡ್ಮಿಂಟನ್ ಅಸೋಸಿಯೇಷನ್ನಲ್ಲಿ ಆಯೋಜಿಸಲಾಗಿದ್ದ ಇಂಡಿಯಾ ಇಂಟರ್ನ್ಯಾಷನಲ್ ಚಾಲೆಂಜ್ ಉದ್ಘಾಟನಾ ಸಮಾರಂಭದಲ್ಲಿ ಪರಮೇಶ್ವರ್ ಭಾಗಿಯಾಗಿದ್ದರು. ಆಟಗಾರರಿಗೆ ಶುಭಾಷಯವನ್ನೂ ಸಹ ತಿಳಿಸಿದ್ದರು. ಈ ವೇಳೆಯೇ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಹೀಗಾಗಿ ಕಾರ್ಯಕ್ರಮಕ್ಕೆ ಸಿಎಂ ಡಿಕೆ ಶಿವಕುಮಾರ್ ಅವರು ಬರುವ ಮುಂಚೆಯೇ ಅವರು ಅಲ್ಲಿಂದ ತೆರಳಿದ್ದರು ಎಂದು ತಿಳಿದುಬಂದಿದೆ. ಬೆಳಿಗ್ಗೆಯಿಂದಲೇ ಅವರಿಗೆ ಸುಸ್ತಿನ ಅನುಭವವಾಗಿತ್ತು. ಡಿಸಿಎಂಗೆ ಹೃದಯಕ್ಕೆ ಸಂಬಂಧಿಸಿದಂತೆ ಸಮಸ್ಯೆ ಆಗಿದೆ ಎಂಬ ಮಾಹಿತಿ ಇದ್ದು, ಅವರನ್ನು ಎಲ್ಲ ರೀತಿಯಿಂದಲೂ ವೈದ್ಯರು ಪರೀಕ್ಷಿಸುತ್ತಿದ್ದಾರೆ ಎನ್ನಲಾಗಿದೆ.

ಸದ್ಯ ವೈದ್ಯರ ತೀವ್ರ ನಿಗಾ ಘಟಕದಲ್ಲಿ (ICU/Special Ward) ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ವೈದ್ಯರ ತಂಡ ಅವರ ಆರೋಗ್ಯ ಸ್ಥಿತಿಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದೆ. ಸಚಿವರ ಆರೋಗ್ಯ ಪರಿಸ್ಥಿತಿ ಕುರಿತಂತೆ ಆಸ್ಪತ್ರೆ ಆಡಳಿತ ಮಂಡಳಿಯು ಶೀಘ್ರದಲ್ಲೇ ಅಧಿಕೃತ ಹೆಲ್ತ್ ಬುಲೆಟಿನ್ ಹೊರಡಿಸುವ ಸಾಧ್ಯತೆಯಿದೆ.

ವೈದೇಹಿ ಆಸ್ಪತ್ರೆಯ ಡಾ.ಶ್ರೀನಿವಾಸ್‌ ಮಾತನಾಡಿ, ಡಿಸಿಎಂ ಡಾ.ಜಿ.ಪರಮೇಶ್ವರ್ ಆರೋಗ್ಯ ಸ್ಥಿರವಾಗಿದೆ. ಅವರು ಆಸ್ಪತ್ರೆಗೆ ನಡೆದುಕೊಂಡೇ ಬಂದಿದ್ದಾರೆ. ಪರಮೇಶ್ವರ್ ಬಂದಾಗ ಹಾರ್ಟ್ರೇಟ್ ಸ್ವಲ್ಪ ಜಾಸ್ತಿ ಆಗಿತ್ತು. ನಾವು ಎಲ್ಲವನ್ನೂ ಕಂಟ್ರೋಲ್ ಮಾಡಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.


Ads on article

Advertise in articles 1

advertising articles 2

Advertise under the article