ಡೆಹ್ರಡೂನ್: ಹೆಲಿಕಾಪ್ಟರ್ ಪತನ!: ಬೆಂಗಳೂರು ಸಿಸಿಬಿ ಇನ್ಸ್ಪೆಕ್ಟರ್ ಅನಿಲ್ ಸೇರಿ ಆರು ಮಂದಿ‌ ಸಾವು.

ಡೆಹ್ರಡೂನ್: ಹೆಲಿಕಾಪ್ಟರ್ ಪತನ!: ಬೆಂಗಳೂರು ಸಿಸಿಬಿ ಇನ್ಸ್ಪೆಕ್ಟರ್ ಅನಿಲ್ ಸೇರಿ ಆರು ಮಂದಿ‌ ಸಾವು.

Helicopter crash 


ಡೆಹ್ರಾಡೂನ್: ಬದರಿನಾಥದಿಂದ ಡೆಹ್ರಾಡೂನ್‌ಗೆ ತೆರಳುತ್ತಿದ್ದ ಹೆಲಿಕಾಪ್ಟರ್ ಪತನಗೊಂಡಿರುವ ಘಟನೆ ಶುಕ್ರವಾರ ನಡೆದಿದೆ. ಇದರಲ್ಲಿ ಪ್ರಯಾಣಿಸುತ್ತಿದ್ದ ಬೆಂಗಳೂರು ಮೂಲದ ಐವರು ಪ್ರಯಾಣಿಕರು ಹಾಗೂ ಓರ್ವ ಪೈಲಟ್ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಬದರಿನಾಥದಿಂದ ಡೆಹ್ರಾಡೂನ್‌ಗೆ ತೆರಳುತ್ತಿದ್ದ ‘ಟ್ರಾನ್ಸ್ ಭಾರತ್ ಏವಿಯೇಷನ್’ (Trans Bharat Aviation) ಸಂಸ್ಥೆಯ ಹೆಲಿಕಾಪ್ಟರ್ ನಾಪತ್ತೆಯಾಗಿತ್ತು. ಇದು ಚಮೋಲಿ ಜಿಲ್ಲೆಯ ಜೋಶಿಮಠದ ಬಳಿ ಪತನಗೊಂಡಿದೆ ಎಂದು ವರದಿಯಾಗಿದೆ.

ಹೆಲಿಕಾಪ್ಟರ್ ಪತ್ತೆಗೆ ಭಾರತೀಯ ಸೇನೆ, ಜಿಲ್ಲಾಡಳಿತ ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF) ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಆರಂಭಿಸಿವೆ.

ಸಿಸಿಬಿ ಇನ್ಸ್ ಪೆಕ್ಟರ್ ಅರುಣ್ ಸಾಲಂಕೆ ಸಾವು:

ಮೃತ ಪ್ರಯಾಣಿಕರನ್ನು ಬೆಂಗಳೂರು ಮೂಲದ ಪ್ರತಾಪ, ಸಿಸಿಬಿ ಇನ್ಸ್ ಪೆಕ್ಟರ್ ಅರುಣ್ ಸಾಲಂಕೆ, ಶಂಕರ್ ಗೌಡ, ಸುಧೀರ್ ಕೆ. ಮತ್ತು ಎಚ್.ಎಸ್. ನಟರಾಜ ಎಂದು ಗುರುತಿಸಲಾಗಿದೆ. ಹೆಲಿಕಾಪ್ಟರ್ ಅನ್ನು ಕ್ಯಾಪ್ಟನ್ ಹಿಮಾಂಶು ಚಲಾಯಿಸುತ್ತಿದ್ದರು ಎಂದು ವರದಿಯಾಗಿದೆ .

ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ, ಜೋಶಿಮಠದ ಸಮೀಪವಿರುವ ಹಾಥಿ ಪರ್ವತ ಪ್ರದೇಶದ ಚೈನ್ ಗ್ರಾಮದ ಬಳಿ ಹೆಲಿಕಾಪ್ಟರ್ ಪತನಗೊಂಡಿರುವ ದುರದೃಷ್ಟಕರ ಸುದ್ದಿ ನಮಗೆ ಲಭ್ಯವಾಗಿದೆ.

ಜಿಲ್ಲಾಡಳಿತ, ವಿಪತ್ತು ನಿರ್ವಹಣಾ ಇಲಾಖೆ ಮತ್ತು ಎಸ್‌ಡಿಆರ್‌ಎಫ್ (SDRF) ಜಂಟಿಯಾಗಿ ರಕ್ಷಣಾ ಕಾರ್ಯಾಚರಣೆಯನ್ನು ನಡೆಸುತ್ತಿವೆ. ನಾನು ಈ ಸಂಪೂರ್ಣ ಘಟನೆಯ ಮೇಲೆ ನಿರಂತರ ನಿಗಾ ಇರಿಸಿದ್ದೇನೆ ಎಂದು ತಿಳಿಸಿದ್ದಾರೆ.

Ads on article

Advertise in articles 1

advertising articles 2

Advertise under the article