ಉಡುಪಿ :ಹಣ ಕಾಸಿನ ವಿಚಾರವಾಗಿ ಆರಂಭವಾದ ಗಲಾಟೆ ;ಕೊಲೆಯಲ್ಲಿ ಅಂತ್ಯ.!

ಉಡುಪಿ: ಹಣಕಾಸಿನ ವಿಚಾರವಾಗಿ
ಆರಂಭವಾದ ಗಲಾಟೆಯೊಂದು ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ಜಿಲ್ಲೆಯ ಬ್ರಹ್ಮಾವರದಲ್ಲಿ ನಡೆದಿದೆ. ರೌಡಿಶೀಟರ್ ಸುಜಿತ್ ಪಿಂಟೊ (43) ಎಂಬಾತನ ತಲೆಗೆ ಕಬ್ಬಿಣದ ರಾಡ್‌ನಿಂದ ಹೊಡೆದು ಹತ್ಯೆ ಮಾಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ರಿಕ್ಷಾ ಚಾಲಕ ಪ್ರಮೋದ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಕೊಲೆಗೆ ಹಣಕಾಸಿನ ವ್ಯವಹಾರವೇ ಕಾರಣ ಎನ್ನಲಾಗಿದೆ.

ಸುಜಿತ್ ಪಿಂಟೊ ಮತ್ತು ರಿಕ್ಷಾ ಚಾಲಕ ಪ್ರಮೋದ್ ನಡುವೆ ಹಣಕಾಸಿನ ವಿಚಾರವಾಗಿ ವಿವಾದವಿತ್ತು. ಪ್ರಮೋದ್‌ಗೆ ಸುಜಿತ್ ಹಣ ಪಾವತಿಸುವುದು ಬಾಕಿ ಇದ್ದ ಹಿನ್ನೆಲೆಯಲ್ಲಿ ಇಬ್ಬರ ನಡುವೆ ಗಲಾಟೆ ಆರಂಭವಾಗಿದೆ ಎಂದು ಹೇಳಲಾಗುತ್ತಿದೆ. ಇಬ್ಬರೂ ಮದ್ಯದ ಅಮಲಿನಲ್ಲಿದ್ದ ವೇಳೆ ಮಾತಿನ ಚಕಮಕಿ ವಿಕೋಪಕ್ಕೆ ತಿರುಗಿ ಹೊಡೆದಾಟ ನಡೆದಿದೆ.

ಈ ವೇಳೆ ಆಕ್ರೋಶಗೊಂಡ ಪ್ರಮೋದ್, ಕಬ್ಬಿಣದ ರಾಡ್‌ನಿಂದ ಸುಜಿತ್ ಪಿಂಟೊ ತಲೆಗೆ ಬಲವಾಗಿ ಹೊಡೆದಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ತಲೆಗೆ ಗಂಭೀರ ಗಾಯಗೊಂಡ ಸುಜಿತ್ ಪಿಂಟೊ ಮೃತಪಟ್ಟಿದ್ದಾನೆ. ಹಣಕಾಸಿನ ವಿಚಾರವಾಗಿ ನಡೆದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿರುವುದು ಸ್ಥಳೀಯವಾಗಿ ಆತಂಕ ಮೂಡಿಸಿದೆ.

ಮೃತ ಸುಜಿತ್ ಪಿಂಟೊ ವಿರುದ್ಧ ಈ ಹಿಂದೆಯೂ ಹಲವು ಅಪರಾಧ ಪ್ರಕರಣಗಳು ದಾಖಲಾಗಿದ್ದವು. 2018ರಲ್ಲಿ ನಡೆದ ಗುರುಪ್ರಸಾದ್ ಭಟ್ ಕೊಲೆ ಪ್ರಕರಣ ಹಾಗೂ 2020ರಲ್ಲಿ ನಡೆದ ಯೋಗೀಶ್ ಪೂಜಾರಿ ಕೊಲೆ ಪ್ರಕರಣದಲ್ಲಿಯೂ ಆತ ಆರೋಪಿಯಾಗಿದ್ದ ಎಂದು ತಿಳಿದುಬಂದಿದೆ.

ಉಡುಪಿ, ಅಕ್ಟೋಬರ್ 28: ಹಣಕಾಸಿನ ವಿಚಾರವಾಗಿ

Ads on article

Advertise in articles 1

advertising articles 2

Advertise under the article