ಮಂಗಳೂರು: ಬಾಲಕರಿಗೆ ಲೈಂಗಿಕ ಕಿರುಕುಳ ಆರೋಪ: ಚರ್ಚ್‌ ಫಾದರ್ ಬಂಧನ.

ಮಂಗಳೂರು: ಬಾಲಕರಿಗೆ ಲೈಂಗಿಕ ಕಿರುಕುಳ ಆರೋಪ: ಚರ್ಚ್‌ ಫಾದರ್ ಬಂಧನ.

File Photo
ಮಂಗಳೂರು: ಚರ್ಚ್‌ಗೆ ಬರುತ್ತಿದ್ದ ಬಾಲಕರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಮಂಗಳೂರಿನ ವೆಲೆನ್ಸಿಯಾ ಚರ್ಚ್‌ನ ಧರ್ಮಗುರು ಫಾದರ್ ಸಿಪ್ರಿಯನ್ ಪಿಂಟೋ ಅವರನ್ನು ಬಂಧಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಾಲಕರಿಬ್ಬರು ನೀಡಿದ ದೂರಿನ ಆಧಾರದ ಮೇಲೆ ಪಾಂಡೇಶ್ವರ ಪೊಲೀಸ್​ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿಯ ಪತ್ತೆಗಾಗಿ ಪೊಲೀಸರು ಶೋಧ ಕಾರ್ಯಾಚರಣೆ ಆರಂಭಿಸಿದ್ದರು. ಬೆಂಗಳೂರಿನ ಹಲವು ಕಡೆಗಳಲ್ಲಿಯೂ ಪೊಲೀಸರು ತಲಾಶ್ ನಡೆಸಿದ್ದರು. ಕೊನೆಗೆ ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಸಂಬಂಧಿಕರ ಮನೆಯಲ್ಲಿದ್ದ ಆರೋಪಿಯನ್ನು ಬಂಧಿಸಲಾಗಿದ್ದು, ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು ಎಂದು ಪೊಲೀಸ್ ಕಮಿಷನರ್ ಮಾಹಿತಿ ನೀಡಿದ್ದಾರೆ.

ಪ್ರಾರ್ಥನೆಗಾಗಿ ಚರ್ಚ್‌ಗೆ ತೆರಳಿದ್ದ ಸಂದರ್ಭದಲ್ಲಿ ಬಾಲಕರಿಗೆ ಲೈಂಗಿಕ ಕಿರುಕುಳ ನೀಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ಬಾಲಕರು ತಮ್ಮ ಪೋಷಕರ ಬಳಿ ಹೇಳಿಕೊಂಡಿದ್ದರು. ಬಳಿಕ ಸಂತ್ರಸ್ತ ಬಾಲಕನ ಕುಟುಂಬ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಗೆ ದೂರು ನೀಡಿತ್ತು.

ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರೆದಿದ್ದು, ಆರೋಪಗಳ ಕುರಿತು ಸತ್ಯಾಸತ್ಯತೆ ಪೊಲೀಸ್​ ತನಿಖೆಯಿಂದ ತಿಳಿದುಬರಬೇಕಿದೆ.

Ads on article

Advertise in articles 1

advertising articles 2

Advertise under the article