BREAKING
ಕ್ರೀಡೆ

ಉಳ್ಳಾಲದ ಅಬ್ದುಲ್ ರೆಹಮಾನ್‌ಗೆ ರಾಜ್ಯಮಟ್ಟದ ಮಾಸ್ಟರ್ ಅಥ್ಲೆಟಿಕ್ಸ್‌ನಲ್ಲಿ ಚಿನ್ನ; ರಾಷ್ಟ್ರಮಟ್ಟಕ್ಕೆ ಆಯ್ಕೆ


    

ಉಳ್ಳಾಲ: ಧಾರವಾಡದಲ್ಲಿ ನಡೆದ 45ನೇ ರಾಜ್ಯಮಟ್ಟದ ಮಾಸ್ಟರ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಉಳ್ಳಾಲದ ಕ್ರೀಡಾಪಟು ಅಬ್ದುಲ್ ರೆಹಮಾನ್ ಅವರು ಚಿನ್ನದ ಪದಕ ಗೆದ್ದು ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

ಮಾಸ್ಟರ್ ಅಥ್ಲೆಟಿಕ್ ಅಸೋಸಿಯೇಷನ್ ಆಫ್ ಕರ್ನಾಟಕ (ರಿ.) ವತಿಯಿಂದ ಧಾರವಾಡದ ಆರ್.ಎನ್. ಶೆಟ್ಟಿ ಸ್ಟೇಡಿಯಂನಲ್ಲಿ ನವೆಂಬರ್ 14 ಮತ್ತು 15ರಂದು ಆಯೋಜಿಸಲಾಗಿದ್ದ 45ನೇ ರಾಜ್ಯಮಟ್ಟದ ಮಾಸ್ಟರ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್-2026ರಲ್ಲಿ ಅಬ್ದುಲ್ ರೆಹಮಾನ್ ಅವರು ಭಾಗವಹಿಸಿದ್ದರು.

ಕ್ರೀಡಾಕೂಟದ 100 ಮೀಟರ್ ಓಟದ ಸ್ಪರ್ಧೆಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಅವರು ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ತಮ್ಮದಾಗಿಸಿಕೊಂಡಿದ್ದಾರೆ. ಈ ಸಾಧನೆಯ ಮೂಲಕ ಉತ್ತರ ಪ್ರದೇಶದ ಲಕ್ನೋದಲ್ಲಿ ಮುಂಬರುವ ದಿನಗಳಲ್ಲಿ ನಡೆಯಲಿರುವ ರಾಷ್ಟ್ರೀಯ ಮಟ್ಟದ ಮಾಸ್ಟರ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ಗೆ ಆಯ್ಕೆಯಾಗಿದ್ದಾರೆ.

ಅಬ್ದುಲ್ ರೆಹಮಾನ್ ಅವರ ಈ ಸಾಧನೆಗೆ ಉಳ್ಳಾಲದ ಕ್ರೀಡಾಭಿಮಾನಿಗಳು, ಹಿತೈಷಿಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಅಭಿನಂದನೆ ಸಲ್ಲಿಸಿದ್ದಾರೆ. ರಾಷ್ಟ್ರಮಟ್ಟದಲ್ಲಿಯೂ ಉತ್ತಮ ಪ್ರದರ್ಶನ ನೀಡಿ ರಾಜ್ಯಕ್ಕೆ ಕೀರ್ತಿ ತರಲಿ ಎಂದು ಶುಭ ಹಾರೈಸಿದ್ದಾರೆ.






📢 ಡೇ ಕರ್ನಾಟಕ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!