ಮಂಗಳೂರಿನಲ್ಲಿ ಇಬ್ಬರು ಬಾಂಗ್ಲಾದೇಶದ ಅಕ್ರಮ ವಲಸಿಗರ ಪತ್ತೆ.ಪಣಂಬೂರು ಬೀಚ್ ಸಮೀಪದ ರೆಸ್ಟೋರೆಂಟ್‌ನಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ವಶಕ್ಕೆ

ಮಂಗಳೂರಿನಲ್ಲಿ ಇಬ್ಬರು ಬಾಂಗ್ಲಾದೇಶದ ಅಕ್ರಮ ವಲಸಿಗರ ಪತ್ತೆ.ಪಣಂಬೂರು ಬೀಚ್ ಸಮೀಪದ ರೆಸ್ಟೋರೆಂಟ್‌ನಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ವಶಕ್ಕೆ

ಮಂಗಳೂರು: ಮಂಗಳೂರು ನಗರದ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ನೆಲೆಸಿದ್ದ ಇಬ್ಬರು ಬಾಂಗ್ಲಾದೇಶದ ಪ್ರಜೆಗಳನ್ನು ಪೊಲೀಸರು ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ.

ಪಣಂಬೂರು ಬೀಚ್ ಸಮೀಪದ ರೆಸ್ಟೋರೆಂಟ್‌ವೊಂದರಲ್ಲಿ ಬಾಂಗ್ಲಾದೇಶದ ಇಬ್ಬರು ಪ್ರಜೆಗಳು ಅಕ್ರಮವಾಗಿ ನೆಲೆಸಿದ್ದು, ಕೆಲಸ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಪಣಂಬೂರು ಪೊಲೀಸ್ ಠಾಣೆಯ ನಿರೀಕ್ಷಕರಿಗೆ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ರೆಸ್ಟೋರೆಂಟ್ ಮೇಲೆ ದಾಳಿ ನಡೆಸಿ, ಅಲ್ಲಿ ಕೆಲಸ ಮಾಡುತ್ತಿದ್ದ ಅಶಿಕುಲ್ ಇಸ್ಲಾಂ ಮತ್ತು ಎಂಡಿ ಅಮೀನ್ ಎಂಬವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ವಿಚಾರಣೆ ವೇಳೆ ಇಬ್ಬರೂ ಯಾವುದೇ ಅಧಿಕೃತ ದಾಖಲೆಗಳಿಲ್ಲದೆ ಭಾರತದಲ್ಲಿ ಅಕ್ರಮವಾಗಿ ನೆಲೆಸಿರುವುದು ಪತ್ತೆಯಾಗಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.

ಮುಂದಿನ ಕಾನೂನು ಪ್ರಕ್ರಿಯೆಯ ಭಾಗವಾಗಿ ಇಬ್ಬರನ್ನು ಅಕ್ರಮ ವಲಸಿಗರ ಬಂಧನ ಕೇಂದ್ರದಲ್ಲಿರಿಸಿ, ಬಳಿಕ ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿ (FRRO) ಮುಂದೆ ಹಾಜರುಪಡಿಸಲು ಹಾಗೂ ಬಾಂಗ್ಲಾದೇಶಕ್ಕೆ ಗಡಿಪಾರು ಮಾಡುವ ಪ್ರಕ್ರಿಯೆ ಕೈಗೊಳ್ಳಲು ಪಣಂಬೂರು ಪೊಲೀಸರು ಮುಂದಾಗಿದ್ದಾರೆ.

ಪಣಂಬೂರು ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸಲೀಂ ಅಬ್ಬಾಸ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಪಿಎಸ್‌ಐಗಳಾದ ಶ್ರೀಕಲಾ ಕೆ.ಟಿ., ಜ್ಞಾನಶೇಖರ್ ಹಾಗೂ ಸಿಬ್ಬಂದಿಗಳಾದ ಇಮ್ತಿಯಾಝ್ ಮತ್ತು ಫಕ್ಕಿರೇಶ್, ರಾಕೇಶ್ ಎಲ್.ಎಂ. ಭಾಗವಹಿಸಿದ್ದರು.

Ads on article

Advertise in articles 1

advertising articles 2

Advertise under the article