BREAKING
ದಕ್ಷಿಣ ಕನ್ನಡ

ಸೌಜನ್ಯಾ ಪ್ರಕರಣ ಮರು ತನಿಖೆ ಚುರುಕು: ದಾಖಲೆಗಳ ಬ್ಯಾಗ್ ಹೊತ್ತು ಎಸ್‌ಐಟಿ ಕಚೇರಿಗೆ ಬಂದ ಗಿರೀಶ್ ಮಟ್ಟಣ್ಣನವರ್! Sowjanya case sit office girish mattannanavar

ಮಂಗಳೂರು: ಧರ್ಮಸ್ಥಳದ ಸೌಜನ್ಯಾ ಪ್ರಕರಣದ ಮರು ತನಿಖೆ ಚುರುಕುಗೊಂಡಿದ್ದು, ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳು ಮತ್ತು ಸಾಕ್ಷ್ಯಗಳನ್ನು ಸಲ್ಲಿಸಲು ಹೋರಾಟಗಾರ ಗಿರೀಶ್ ಮಟ್ಟಣ್ಣನವರ್ ಅವರು ಮಂಗಳೂರಿನ ಎಸ್‌ಐಟಿ ಕಚೇರಿಗೆ ಆಗಮಿಸಿದ್ದಾರೆ.**

ಎಸ್‌ಐಟಿ ಅಧಿಕಾರಿಗಳ ಸೂಚನೆಯಂತೆ ಪ್ರಕರಣಕ್ಕೆ ಸಂಬಂಧಿಸಿದ ಹಲವು ದಾಖಲೆಗಳು, ಕಡತಗಳು ಹಾಗೂ ವಿವಿಧ ಪತ್ರಿಕಾ ವರದಿಗಳನ್ನು ಬ್ಯಾಗ್‌ನಲ್ಲಿ ತುಂಬಿಕೊಂಡು ಬಂದಿರುವ ಮಟ್ಟಣ್ಣನವರ್, ಅವುಗಳನ್ನು ತನಿಖಾಧಿಕಾರಿಗಳಿಗೆ ಸಲ್ಲಿಸಲು ಮುಂದಾಗಿದ್ದಾರೆ.

ಸೌಜನ್ಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ವರ್ಷಗಳಿಂದ ಹೋರಾಟ ನಡೆಸುತ್ತಿರುವ ಗಿರೀಶ್ ಮಟ್ಟಣ್ಣನವರ್ ಅವರಿಂದ ಪ್ರಕರಣದ ಕುರಿತು ಮಾಹಿತಿ ಹಾಗೂ ಲಭ್ಯವಿರುವ ದಾಖಲೆಗಳನ್ನು ಎಸ್‌ಐಟಿ ಅಧಿಕಾರಿಗಳು ಪಡೆದುಕೊಳ್ಳಲಿದ್ದಾರೆ.

ಇದೇ ವೇಳೆ, ಪ್ರಕರಣದ ಮತ್ತೊಬ್ಬ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೂ ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ ಬುಲಾವ್ ನೀಡಿದೆ ಎಂದು ತಿಳಿದುಬಂದಿದೆ.

ಪ್ರಕರಣದ ಮರು ತನಿಖೆಯ ಭಾಗವಾಗಿ ಹಳೆಯ ದಾಖಲೆಗಳು, ಸಾಕ್ಷ್ಯಗಳು ಹಾಗೂ ಈ ಹಿಂದೆ ಪ್ರಕರಣದ ಕುರಿತು ಹೋರಾಟ ನಡೆಸಿದವರಿಂದ ಮಾಹಿತಿ ಸಂಗ್ರಹಿಸಲು ಎಸ್‌ಐಟಿ ಮುಂದಾಗಿದೆ.

ಸೌಜನ್ಯಾ ಪ್ರಕರಣದ ಮರು ತನಿಖೆಯಲ್ಲಿ ಹಳೆಯ ದಾಖಲೆಗಳು ಮತ್ತು ಹೊಸದಾಗಿ ಲಭ್ಯವಾಗುವ ಮಾಹಿತಿಗಳು ಯಾವ ರೀತಿಯ ಬೆಳವಣಿಗೆಗೆ ಕಾರಣವಾಗಲಿವೆ ಎಂಬುದು ಕುತೂಹಲ ಮೂಡಿಸಿದೆ.

📢 ಡೇ ಕರ್ನಾಟಕ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!